ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ರಿಂದ ಎಸ್.ಐ.ಆರ್. ಪ್ರಕ್ರಿಯೆ ಪ್ರಗತಿ ಪರಿಶೀಲನೆ
ಮೈಸೂರು; ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಳ ಪ್ರಗತಿ ಪರಿಶೀಲಿಸಿದರು.ಬಿ.ಎಲ್.ಓ ಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಿರ್ವಹಿಸಬೇಕು. ಮತದಾರರ ನೋಂದಣಾಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆಯನ್ನು ಪರಿಶೀಲಿಸಬೇಕು. ಎಸ್.ಐ.ಆರ್ ಕಾರ್ಯವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ನಿಗಾ…