Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಧರ್ಮದೇಟು


ನಂಜನಗೂಡು; ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು, ಆತನನ್ನು ಪೊಲೀಸರ ವಶಕ್ಕೆ ನೀಡಿದ ಘಟನೆ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಸುರೇಶ್(23) ಪೊಲೀಸರ ಅತಿಥಿಯಾದ ಕಾಮುಕ.ತಂದೆ ತಾಯಿ ಕೂಲಿಗೆ ಹೋಗಿರುವುದ್ದು ಬಾಲಕಿ ಒಂಟಿಯಾಗಿರುವುದನ್ನ ಗಮನಿಸಿ ಮನೆಗೆ ನುಗ್ಗಿದ ಈತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಈ ವೇಳೆ ಬಾಲಕಿಯ ಚೀರಾಡಿದ್ದಾಳೆ. ಅಕ್ಕಪಕ್ಕದ ಮನೆಯವರು ಬಂದು ಆತನನ್ನು ಹಿಡಿದು ಹಿಗ್ಗ ಮಗ್ಗ ಥಳಿಸಿದ ಬಳಿಕ ಹುಲ್ಲಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ. ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.