
ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷಿö್ಮÃನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜು.22ರಂದು ಬುಧವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 9342188323, 7598832271 ಸಂಪರ್ಕಿಸಬಹುದು.