Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ


ಹುಣಸೂರು: ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳು ಮತ್ತು ಹೆಂಡತಿಯನ್ನು ಕೊಂದು, ಡೆತ್ ನೋಟ್ ಬರೆದಿಟ್ಟು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯ ನಿವಾಸಿಯಾದ ಹರೀಶ್ (49) ತನ್ನ ಪತ್ನಿ ನಿಶ್ಚಿತ (36) ಮತ್ತು ನಿಕ್ಷಾ (12) ಹಾಗೂ ರಕ್ಷಾ (8) ಮೃತಪಟ್ಟವರು. ಫೈನಾನ್ಸ್ ಹಾಗೂ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ಹರೀಶ್ ಕಳೆದ ಮೂರು ದಿನಗಳ ಹಿಂದೆ ತಮ್ಮ ತಾಯಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದ. ನೆಲಮಹಡಿಯಲ್ಲಿ ತನ್ನ ಹೆಂಡತಿ ಹಾಗೂ ಮಕ್ಕಳ ಮೂಗು ಮತ್ತು ಬಾಯಿಗೆ ಪ್ಲಾಸ್ಟರ್ ಅಂಟಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿದ ಹರೀಶ್ ಮೊದಲ ಮಹಡಿಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ರಾತ್ರಿಯೇ ಈ ಘಟನೆ ನಡೆದಿರುವ ಶಂಕೆ ಇದೆ. ಇಂದು ಬೆಳಗ್ಗೆ ಎಷ್ಟೊತ್ತಾದರೂ ಮನೆ ಬಾಗಿಲು ತೆರೆಯದೇ ಇದ್ದಾಗ ಅಕ್ಕಪಕ್ಕದವರು, ಕಿಟಕಿ ಮೂಲಕ ನೋಡಿದಾಗ ದುರಂತ ನಡೆದಿರುವುದು ಕಂಡು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಸಿಕ್ಕ ಡೆತ್ ನೋಟ್ ವಶಕ್ಕೆ ತೆಗೆದುಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಕೊಲೆ ಮತ್ತು ಆತ್ಮಹತ್ಯೆಗೆ ನಿಖರ ಕಾರಣ ಈವರೆಗೆ ಗೊತ್ತಾಗಿಲ್ಲ.