Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅರ್ಹ ಫಲಾನುಭವಿಗಳು ಗ್ಯಾರೆಂಟಿ ಯೋಜನೆಗಳ ಸೌಲಭ್ಯದಿಂದ ವಂಚಿತರಾಗಬಾರದು; ಅರುಣ್ ಕುಮಾರ್


ಮೈಸೂರು:
ಅರ್ಹ ಫಲಾನುಭವಿಗಳು ಗ್ಯಾರೆಂಟಿ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗಬಾರದು . ಒಂದು ವೇಳೆ ಫಲಾನುಭವಿಗಳು ಯೊಜನೆಯಿಂದ ವಂಚಿತರಾಗಿದ್ದರೆ ಅವರನ್ನು ಯೋಜನೆಯಲ್ಲಿ ನೊಂದಾಯಿಸಿಕೊಳ್ಳಿ ಎಂದು ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ನ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೃತ ಫಲಾನುಭವಿಗಳನ್ನು ಯೋಜನೆಗಳಿಂದ ಕೈಬಿಡುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.
ಗೃಹ ಜ್ಯೋತಿ ಯೋಜನೆಯ ಅಪ್ಡೇಟ್ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳ ಹೊರಗುಳಿಯದಂತೆ ಚೆಸ್ಕಾಂ ಅಧಿಕಾರಿಗಳು ಗಮನ ಹರಿಸಬೇಕು. ಮೀಟರ್ ರೀಡರ್ಗಳು ಮನೆ, ಮನೆಗೆ ಬೇಟಿ ನೀಡಿ, ಮಾಹಿತಿ ಹಾಗೂ ದಾಖಲಾತಿಗಳನ್ನು ಅಪ್ಡೇಟ್ ಮಾಡಬೇಕು. ಶಕ್ತಿಯೋಜನೆಯಲ್ಲಿ ಯಾವುದೇ ಕೊರತೆ ಆಗದಂತೆ, ಸರಾಗವಾಗಿ ಉಚಿತ ಬಸ್ ಪ್ರಯಾಣ ಸೌಲಭ್ಯ ಮಹಿಳೆಯರಿಗೆ ದೊರೆಯುತ್ತಿದೆ. ನಿಗದಿತ ಬಸ್ ನಿಲ್ದಾಣಗಳಲ್ಲಿ ಬಸ್ಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಬೇಕು. ಇಲವಾಲ ಪೊಲೀಸ್ ಸ್ಟೇಷನ್ ಮುಂಭಾಗ ಬಸ್ ಬೇ ನಿರ್ಮಾಣ ಮಾಡಬೇಕು. ಹೆಚ್ಚಿನ ಜನಸಂದಣಿ ಇರುವ ಕಡೆ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು. ಶಾಲಾ ಕಾಲೇಜು ಅವಧಿಯಲ್ಲಿ ಹೆಚ್ಚಿನ ಬಸ್‌ಗಳ ಅಪರೇಟ್ ಮಾಡಬೇಕು ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ತಿಳಿಸಿದರು.
ಪಡಿತರ ಆಹಾರ ವಿತರಣೆ ಸಂದರ್ಭದಲ್ಲಿ ತೂಕ ಮತ್ತು ಅಳತೆಯಲ್ಲಿ ಫಲಾನುಭವಿಗಳಿಗೆ ಮೋಸ ಅಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಪಡಿತರ ನೀಡುವ ಆಹಾರ ಗುಣಮಟ್ಟದಿಂದ ಕೂಡಿರಬೇಕು.ಯುವ ನಿದಿ ಯೋಜನೆಯಲ್ಲಿ ಹೊಸದಾಗಿ ನೋಂದಣಿ ಆಗಲು ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.
ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಶಿವಕುಮಾರ್ ಮಾತನಾಡಿ, ವಿದ್ಯುತ್ ಟ್ರಾನ್ಸಾ÷್ಫರ್ಮರ್ ಗಳನ್ನು ಜನಸಂದಣಿ ಇಲ್ಲದ ಜಾಗದಲ್ಲಿ ಅಳವಡಿಸಬೇಕು. ಟ್ರಾನ್ಸಾ÷್ಪರ್ಮರ್ ಸುತ್ತ ಸುರಕ್ಷತಾ ಬೇಲಿಗಳನ್ನು ನಿರ್ಮಾಣ ಮಾಡಬೇಕು. ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಬೇಕು. ಮರಣ ಹೊಂದಿದ ಫಲಾನುಭವಿಗಳಿಗೆ ಗೃಹಲಕ್ಷಿ÷್ಮ ಯೋಜನೆಯ ಹಣ ಪಾವತಿಯಾಗಿದ್ದು, ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು. ಮರಣ ಹೊಂದಿದ ನಂತರವು ಪಾವತಿಯಾದ ಹಣವನ್ನು ಅವರ ಕುಂಟುAಬಸ್ಥರಿAದ ವಸೂಲಿ ಮಾಡಿ, ಸರ್ಕಾರಕ್ಕೆ ಕಟ್ಟಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚೆಸ್ಕಾಂನ ಇಂಜಿನಿಯರ್ ಸುನಿಲ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 9.81.299 ಅರ್ಹ ಗ್ರಾಹಕರಿದ್ದು, ಗೃಹ ಜ್ಯೋತಿ ಯೋಜನೆಯಲ್ಲಿ 9.73,321 ನೋಂದಣಿಯಾಗಿದೆ. 7,978 ಜನ ನೋಂದಣಿ ಆಗಬೇಕಿದೆ. ಮೀಟರ್ ರೀಡರ್ಗಳು ಮನೆ ಮನೆಗೆ ಭೇಟಿ ನೀಡಿ ಗೃಹ ಜ್ಯೋತಿ ಅಪ್ಡೇಟ್ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 50,985 ಟ್ರಾನ್ಸಾ÷್ಫರ್ಮರ್ ಗಳು ಇವೆ ಎಂದು ಮಾಹಿತಿ ನೀಡಿದರು.
ಕೆ.ಎಸ್.ಆರ್.ಟಿ.ಸಿ ಯ ವಿಭಾಗೀಯ ನಿಯಂತ್ರಣಧಿಕಾರಿ ವೀರೇಶ್ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ 29 ಅಪಘಾತಗಳು ಸಂಭವಿಸಿದೆ. ನಮ್ಮ ಚಾಲಕರ ಅಜಾಗರುಕತೆಯಿಂದ 22 ಅಪಘಾತಗಳು ಆಗಿವೆ.7 ಮರಣಗಳು ಸಂಭವಿಸಿವೆ. ಅಪಘಾತಗಳಿಗೆ ಕಾರಣವಾದ ಚಾಲಕರಿಗೆ ಕೌನ್ಸಿಲಿಂಗ್ ಮಾಡಲಾಗಿದೆ. ರಾತ್ರಿ ವೇಳೆ ಅಪಘಾತಗಳು ಕಡಿಮೆಯಾಗಿವೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾಗರಾಜು ಮಾತನಾಡಿ, ಇದುವರೆಗೂ 34 ಕಂತುಗಳ ಹಣ ಬಿಡುಗಡೆಯಾಗಿದೆ. ಮೇ ಅಂತ್ಯದವರೆಗೆ ಗೃಹಲಕ್ಷಿ÷್ಮ ಯೋಜನೆಯ ಕಂತುಗಳು ಪಾವತಿಯಾಗಿದೆ. ಮರಣ ಹೊಂದಿದ 5505 ಫಲಾನುಭವಿಗಳಿಗೆ ಜಿಲ್ಲೆಯಲ್ಲಿ ಹಣ ಬಿಡುಗಡೆಯಾಗಿತ್ತು. ಇವರ ಕುಟುಂಬದವರಿoದ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿ.ಪಂ ಸಿಇಒ ಎಸ್ ಯುಕೇಶ್ ಕುಮಾರ್, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಉಪಾಧ್ಯಕ್ಷರಾದ ಹುಣಸೂರು ಬಸವಣ್ಣ, ಕರಿಗೌಡ ಬಿ.ಎನ್ ಹಾಗೂ ಸದಸ್ಯರಾದ ಸಾಮಾ ಯೋಗೇಶ್, ಉತ್ತನಹಳ್ಳಿ ಶಿವಣ್ಣ, ಚಾಮರಾಜು, ಚಲುವರಾಜು, ಅಬ್ದುಲ್ ಖಾದರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.