Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜುಲೈ 29.ರಂದು ಅರ್ಥಪೂರ್ಣವಾಗಿ ಹಡಪದ ಅಪ್ಪಣ್ಣ  ಜಯಂತಿ ಆಚರಣೆ ;  ಆರ್. ಐಶ್ವರ್ಯ

ಮೈಸೂರು:    ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ  ಜುಲೈ 29.ರಂದು ನಗರದ ಕಲಾಮಂದಿರದ ಕಿರುರಂಗಮoದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ  ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದರು.

ಹಡಪದ ಅಪ್ಪಣ್ಣ ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಅವರ ಎಲ್ಲಾ ಅಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ  ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ನೀಡಲು ಜಯಂತಿಗಳನ್ನು ಆಚರಣೆ ಮಾಡುತ್ತಿದ್ದೇವೆ ಎಂದರು.

 ಹಡಪದ ಅಪ್ಪಣ್ಣ ಜಯಂತಿಯನ್ನು ಜುಲೈ 29.ರಂದು ಬೆಳಗ್ಗೆ 11:30 ಗಂಟೆಗೆ ಕಲಾಮಂದಿರದ ಕಿರುರಂಗ ಮಂದಿರದಲ್ಲಿ ಆಚರಣೆ ಮಾಡಲಾಗುವುದು.ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ ಮುಖಂಡರ ಸಲಹೆಯಂತೆ ದಿವ್ಯ ಸಾನಿಧ್ಯ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸಲಾಗುವುದು ಎಂದರು.

ಜಯoತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಮಹನೀಯರ ತತ್ವ ಆದರ್ಶಗಳನ್ನು ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವೇದಿಕೆಯ ಮೇಲೆ ಗಣ್ಯರಿಗೆ ಬೊಕ್ಕೆಗಳನ್ನು ನೀಡಿ ಸ್ವಾಗತ ಮಾಡುವ ಬದಲು ಆಯಾ ಜಯಂತಿಗಳಲ್ಲಿ ಆ ಮಹನೀಯರ ಜೀವನ ಚರಿತ್ರೆ ಕುರಿತ ಪುಸ್ತಕಗಳನ್ನು ನೀಡಿ ಸ್ವಾಗತ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ವಿವಿಧ ಜಯಂತಿಗಳ ಆಚರಣೆ ಮಾಡುವಾಗ ಮೈಸೂರು ನಗರದಲ್ಲಿ ಇರುವ ಎಲ್ಲಾ ಮಹನೀಯರ ಪ್ರತಿಮೆಗಳನ್ನು ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಡಿ ಎಂ ಸುದರ್ಶನ್ ಅವರು ಮಾತನಾಡಿ ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದ ಕಿರುರಂಗಮoದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಸಮುದಾಯದ ಮುಖಂಡರು ಮಾತನಾಡಿ ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಡಪದ ಅಪ್ಪಣ್ಣ ಸಮುದಾಯದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.