Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿಯಿಂದ ಪ್ರತಿಭಟನೆ


ಮೈಸೂರು ; ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ಸೌಕರ್ಯದ ಕೊರತೆ ನಿವಾರಿಸಬೇಕು, ಹಾಸ್ಟೆಲ್ ಸಮಸ್ಯೆಗಳನ್ನು ಪರಿಹರಿಸಬೇಕು ಹಾಗೂ ಬಾಕಿ ಇರುವ ಸ್ಕಾಲರ್ಶಿಪ್ ವಿಳಂಬದAತಹ ತೀವ್ರ ಶೈಕ್ಷಣಿಕ ಬಿಕ್ಕಟ್ಟುಗಳ ನಡುವೆಯೂ, ರಾಜ್ಯದಲ್ಲಿ ಈ ಜವಾಬ್ದಾರಿಯನ್ನು ಹೊರಬೇಕಾದ ಶಿಕ್ಷಣ ಸಚಿವರೇ ಇಲ್ಲದಿರುವುದನ್ನು ತೀವ್ರವಾಗಿ ಖಂಡಿಸಿ ಬುಧವಾರ ನಗರದಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ನಗರಪಾಲಿಕೆ ಕಚೇರಿಯ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ನಾನಾ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಪರಿಷತ್‌ನ ಜಿಲ್ಲಾ ಸಂಚಾಲಕರಾದ ನಂದನ್ ಕುಮಾರ್ ಹೆಚ್,
ರಾಜ್ಯದ ಹಲವು ಭಾಗಗಳಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳ ಕೊರತೆಯಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳು ತರಗತಿಗಳಿಗೆ ಸಕಾಲಕ್ಕೆ ತಲುಪಲಾಗದೆ ಶೈಕ್ಷಣಿಕವಾಗಿ ಹಿಂದುಳಿಯುತ್ತಿದ್ದಾರೆ. ಇಲಾಖೆಯ ಸಮನ್ವಯದ ಕೊರತೆಯಿಂದಾಗಿ ವಿದ್ಯಾರ್ಥಿ ಪಾಸ್ ವಿತರಣೆಯೂ ವಿಳಂಬವಾಗಿದ್ದು, ನಿತ್ಯ ಬಸ್ ಫುಟ್‌ಬೋರ್ಡ್ ಮೇಲೆ ಪ್ರಾಣದ ಹಂಗು ತೊರೆದು ಪ್ರಯಾಣಿಸಬೇಕಾದ ದುಃಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ, ಸರ್ಕಾರಿ ವಿದ್ಯಾರ್ಥಿನಿಲಯಗಳ (ಹಾಸ್ಟೆಲ್) ಪ್ರವೇಶಾತಿ ಪ್ರಕ್ರಿಯೆಯು ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ದೂರದ ಊರುಗಳಿಂದ ಬಂದ ಬಡ ವಿದ್ಯಾರ್ಥಿಗಳು ವಸತಿ ಮತ್ತು ಊಟದ ಸೌಕರ್ಯವಿಲ್ಲದೆ ಬೀದಿಪಾಲಾಗುವಂತಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕಳೆದ ಸಾಲಿನಿಂದಲೂ ಬಾಕಿ ಇರುವ ವಿದ್ಯಾಸಿರಿ ಸೇರಿದಂತೆ ವಿವಿಧ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಗಳ ಇನ್ನು ಇಲಾಖೆಗಳಿಂದ ಬಿಡುಗಡೆಯಾಗಿಲ್ಲ. ತಾಂತ್ರಿಕ ದೋಷಗಳು ಮತ್ತು ಸರ್ವರ್ ಸಮಸ್ಯೆಗಳ ನೆಪವೊಡ್ಡಿ ಇಲಾಖೆಗಳು ಕಾಲಹರಣ ಮಾಡುತ್ತಿರುವುದರಿಂದ, ವಿದ್ಯಾರ್ಥಿಗಳು ಕಾಲೇಜು ಶುಲ್ಕ ಹಾಗೂ ಪರೀಕ್ಷಾ ಸರಣಿಯ ವೆಚ್ಚಗಳನ್ನು ಭರಿಸಲಾಗದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ ಒಂದು ವಾರದೊಳಗೆ ಸಾರಿಗೆ, ವಸತಿ ಮತ್ತು ವಿದ್ಯಾರ್ಥಿವೇತನದ ಈ ಮೂರೂ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಕಾಲೇಜು ಬಂದ್ ಹಾಗೂ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ತಕ್ಷಣವೇ ಪೂರ್ಣಗೊಳಿಸುವಂತೆ ಒತ್ತಾಯಿಸಿದರು. ರಾಜ್ಯದ ಒಟ್ಟು 432 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 3,000 ಕಾಯಂ ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಪ್ರಸ್ತುತ ಕೇವಲ 3,000 ಕಾಯಂ ಉಪನ್ಯಾಸಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಇದು ಒಟ್ಟು ಅಗತ್ಯದ
ಕೇವಲ ಶೇಕಡಾ 20% ರಷ್ಟಾಗಿದೆ. ಉಳಿದ ಶೇಕಡಾ 80% ರಷ್ಟು ಬೋಧನಾ ವ್ಯವಸ್ಥೆಯು ಅತಿಥಿ ಉಪನ್ಯಾಸಕರ ಮೇಲೆಯೇ ಅವಲಂಬಿತವಾಗಿದೆ. ಸದ್ಯಕ್ಕೆ ಕಾಲೇಜುಗಳ ನಿರ್ವಹಣೆಗೆ 12,000 ಅತಿಥಿ ಉಪನ್ಯಾಸಕರ ಅಗತ್ಯವಿದ್ದು, ಈ ಹುದ್ದೆಗಳಿಗೆ 55,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಶೈಕ್ಷಣಿಕ ವರ್ಷ ಆರಂಭವಾದರೂ ನೇಮಕಾತಿ ವಿಳಂಬವಾಗುತ್ತಿರುವುದರಿAದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಸರ್ಕಾರ ತಕ್ಷಣವೇ ಕೌನ್ಸಿಲಿಂಗ್ ನಡೆಸಿ ಆದೇಶ ನೀಡಬೇಕೆಂದು ಒತ್ತಾಯಿಸಿದರು.
ಮುಖಂಡ ಗೌರವ್ ಮಾತನಾಡಿ, ಸಮರ್ಪಕ ಬಸ್ ಸೌಕರ್ಯ ಮತ್ತು ಸುಲಭ ಪಾಸ್ ವಿತರಣೆ ಮಾಡಬೇಕೆಂದು ಒತ್ತಾಯಿಸಿದರು.
ಲಕ್ಷಿ÷್ಮತಾ ಮಾತನಾಡಿ, ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳುಗಳೇ ಕಳೆದರೂ ಸರ್ಕಾರಿ ಹಾಸ್ಟೆಲ್‌ಗಳ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರವೇಶಾತಿ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದಾಗಿ ದೂರದ ಊರುಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಜಾಗವಿಲ್ಲದೆ ಪರದಾಡುವಂತಾಗಿದೆ. ತಕ್ಷಣವೇ ಅರ್ಹರೆಲ್ಲರಿಗೂ ಹಾಸ್ಟೆಲ್ ಸೀಟು ಹಂಚಿಕೆ ಮಾಡಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಸುಧಾರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರ ಕಾರ್ಯದರ್ಶಿ ಸಜಿತ್, ಮುಖಂಡರುಗಳಾದ ಭಾನುತೇಜ, ವಿಭಾಗ ವಿದ್ಯಾರ್ಥಿನಿ ಪ್ರಮುಖರಾದ ಮೇಘನಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂದಾರ ಬಾಳುಗೋಡು ಸೇರಿದಂತೆ ಹಲವು ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.