Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಓಣಂ ಹಬ್ಬದ ಪ್ರಯುಕ್ತ ಮೈಸೂರು-ಕಣ್ಣೂರು- ಬೆಂಗಳೂರು ದಂಡು ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ
ಮೈಸೂರು; ಓಣಂ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಹಾಗೂ ಸುಗಮ ಪ್ರಯಾಣಕ್ಕೆ ಅನುಕೂಲವಾಗುವಂತೆ, ನೈಋತ್ಯ ರೈಲ್ವೆ ಮೈಸೂರು-ಕಣ್ಣೂರು-ಬೆಂಗಳೂರು ದಂಡು ನಡುವೆ ತಲಾ ಎರಡು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ 06227 ಮೈಸೂರು-ಕಣ್ಣೂರು ವಿಶೇಷ ಎಕ್ಸ್ಪ್ರೆಸ್ 25.08.2026 (ಮಂಗಳವಾರ) ರಂದು 22:30 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ 14:00 ಗಂಟೆಗೆ ಕಣ್ಣೂರು ತಲುಪಲಿದೆ.
ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06228 ಕಣ್ಣೂರು-ಬೆಂಗಳೂರು ದಂಡು ವಿಶೇಷ ಎಕ್ಸ್ಪ್ರೆಸ್ ದಿನಾಂಕ 26.08.2026 (ಗುರುವಾರ) ರಂದು 18:25 ಗಂಟೆಗೆ ಕಣ್ಣೂರಿನಿಂದ ಹೊರಟು, ಮರುದಿನ 08:35 ಗಂಟೆಗೆ ಬೆಂಗಳೂರು ದಂಡು ತಲುಪಲಿದೆ.
ರೈಲು ಸಂಖ್ಯೆ 06229 ಮೈಸೂರು-ಕಣ್ಣೂರು ವಿಶೇಷ ಎಕ್ಸ್ಪ್ರೆಸ್ ದಿನಾಂಕ 29.08.2026 (ಶನಿವಾರ) ರಂದು 23:55 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ 17:50 ಗಂಟೆಗೆ ಕಣ್ಣೂರು ತಲುಪಲಿದೆ.
ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06230 ಕಣ್ಣೂರು-ಬೆಂಗಳೂರು ದಂಡು ವಿಶೇಷ ಎಕ್ಸ್ಪ್ರೆಸ್ ದಿನಾಂಕ 30.08.2026 (ಭಾನುವಾರ) ರಂದು 19:45 ಗಂಟೆಗೆ ಕಣ್ಣೂರಿನಿಂದ ಹೊರಟು, ಮರುದಿನ 10:00 ಗಂಟೆಗೆ ಬೆಂಗಳೂರು ದಂಡು ತಲುಪಲಿದೆ.
ಮಾರ್ಗ ಮದ್ಯ, ಮೈಸೂರು-ಕಣ್ಣೂರು ವಿಶೇಷ ರೈಲುಗಳು ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ ಜಂಕ್ಷನ್, ಸೇಲಂ ಜಂಕ್ಷನ್, ಈರೋಡ್ ಜಂಕ್ಷನ್, ತಿರುಪ್ಪೂರು, ಪೊದನೂರು ಜಂಕ್ಷನ್, ಪಾಲಕ್ಕಾಡ್ ಜಂಕ್ಷನ್, ಶೋರನೂರು ಜಂಕ್ಷನ್, ತಿರೂರು, ಖಾಜಿಕೊಡ, ವಡಕರ ಮತ್ತು ತಲಶ್ಶೇರಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ. ಹಿಂತಿರುಗುವ ದಿಕ್ಕಿನಲ್ಲಿ ಸಂಚರಿಸುವ ಕಣ್ಣೂರು?ಬೆಂಗಳೂರು ದಂಡು ವಿಶೇಷ ರೈಲು ಬೆಂಗಳೂರು ದಂಡು ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ.
ಈ ವಿಶೇಷ ರೈಲುಗಳಲ್ಲಿ ಒಟ್ಟು 20 ಬೋಗಿಗಳು ಇರಲಿದ್ದು, ಅವುಗಳಲ್ಲಿ 1 ಎಸಿ ಟು ಟಯರ್ ಬೋಗಿ, 2 ಎಸಿ ತ್ರಿ ಟಯರ್ ಬೋಗಿಗಳು, 9 ಸ್ಲೀಪರ್ ಕ್ಲಾಸ್ ಬೋಗಿಗಳು, 6 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳನ್ನು ಒಳಗೊಂಡಿರಲಿವೆ ಎಂದು ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ
ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.