Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಂಶೋಧಕರು, ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ


ಮೈಸೂರು: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿ, ಹಾಗೂ ವಿದ್ಯಾರ್ಥಿ ಗಳ ಹೋರಾಟ ಬೆಂಬಲಿಸಿ ನಗರದಲ್ಲಿ ಬುಧವಾರ ಸಂಶೋಧಕರು, ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜ್ ಖಂಡನೀಯ ಹಾಗೂ ಅಮಾನವೀಯ. ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ದಮನ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅಕ್ರಮ ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿ ದಬ್ಬಾಳಿಕೆ ನಡೆಸಿದ. ಇದರಿಂದ ನೂರಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.
ಕೇಂದ್ರ ಸರ್ಕಾರ ಕೂಡಲೇ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕು. ಸೋನಂ ವಾಗ್ಚುಕ್ ಅವರೊಂದಿಗೆ ಮಾತುಕತೆ ನಡೆಸಿ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಬೇಕು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಶೋಧಕರು, ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.