Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ಜಿಲ್ಲೆಯಲ್ಲಿ ಅನಧಿಕೃತ ಹೋಂ ಸ್ಟೇಗಳ ಕಾರ್ಯಾಚರಣೆ ಸ್ಥಗಿತ; ಕಡ್ಡಾಯ ನೋಂದಣಿಗೆ ಜಿಲ್ಲಾಧಿಕಾರಿ ಆದೇಶ

ಮೈಸೂರು: ಕೊಡಗು ಜಿಲ್ಲೆಯ ಹೋಂ ಸ್ಟೇಯೊಂದರಲ್ಲಿ ನಡೆದ ವಿದೇಶಿ ಪ್ರವಾಸಿ ಮಹಿಳೆಯ ಮೇಲಿನ ದೌರ್ಜನ್ಯದ ಘಟನೆಯು ಪ್ರವಾಸಿಗರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಗೆ ಭೇಟಿ ನೀಡುವ ದೇಶ-ವಿದೇಶಿ ಪ್ರವಾಸಿಗರ ಹಿತದೃಷ್ಟಿಯಿಂದ ಹಾಗೂ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.
ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳದೆ ಕಾನೂನುಬಾಹಿರವಾಗಿ ನಡೆಸಲ್ಪಡುತ್ತಿರುವ ಜಿಲ್ಲೆಯ ಎಲ್ಲಾ ಹೋಂ ಸ್ಟೇಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಬೇಕು ಹಾಗೂ ಈ ಆದೇಶವನ್ನು ಉಲ್ಲಂಘಿಸಿ ಕಾರ್ಯಾಚರಣೆ ಮುಂದುವರಿಸುವ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಹೋಂ ಸ್ಟೇ ನಡೆಸಲು ಇಚ್ಛಿಸುವ ಮಾಲೀಕರು ಸಂಬAಧಪಟ್ಟ ಸಕ್ಷಮ ಪ್ರಾಧಿಕಾರಗಳಿಂದ (ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆಗಳು ಇತ್ಯಾದಿ) ಅಗತ್ಯವಿರುವ ಎಲ್ಲಾ ನಿರಾಕ್ಷೇಪಣಾ ಪತ್ರಗಳನ್ನು (ಓಔಅ) ಪಡೆದು, ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.
ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅಂತಹ ಘಟಕಗಳಲ್ಲಿ ಪ್ರವಾಸಿಗರಿಗೆ ವಸತಿ ಕಲ್ಪಿಸುವುದನ್ನು ನಿಷೇಧಿಸಲಾಗಿದೆ. ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ಕೇವಲ ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಮತ್ತು ಪರವಾನಗಿ ಹೊಂದಿರುವ ಹೋಂ ಸ್ಟೇ, ಹೋಟೆಲ್‌ಗಳಲ್ಲಿ ಮಾತ್ರ ವಾಸ್ತವ್ಯ ಹೂಡಬೇಕೆಂದು ವಿನಂತಿಸಲಾಗಿದ್ದು, ತಂಗುವ ಮೊದಲು ಸದರಿ ವಸತಿ ಗೃಹವು ಅಧಿಕೃತವಾಗಿ ನೋಂದಣಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸೂಕ್ತವಾಗಿದೆ. ಜಿಲ್ಲೆಯಾದ್ಯಂತ ಇರುವ ಹೋಂ ಸ್ಟೇಗಳ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಲು ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಪ್ರವಾಸಿಗರ ದಾಖಲೆಗಳ ನಿರ್ವಹಣೆ ಮತ್ತು ಸಿಬ್ಬಂದಿಗಳ ಹಿನ್ನೆಲೆ ತಪಾಸಣೆಯನ್ನು ನಡೆಸಲಿದ್ದಾರೆ.
ತುರ್ತು ಸಹಾಯವಾಣಿ ಸಂಖ್ಯೆಗಳಾದ 112, ರಾ಼ಷ್ರೀಯ ಪ್ರವಾಸಿ ಸಹಾಯವಾಣಿ 1800-11-1363 / 1363, ಮಹಿಳಾ ಸುರಕ್ಷತೆ, -181, ಮಕ್ಕಳ ಸಹಾಯವಾಣಿ, 1098 – ಹತ್ತಿರದ ಆಸ್ಪತ್ರೆ ಅಥವಾ ಪ್ರಾಧಿಕಾರದ ಸಂಖ್ಯೆಗಳು, ಪ್ರವಾಸೋದ್ಯಮ ಇಲಾಖೆಯ ಸಹಾಯಕ/ಉಪ ನಿರ್ದೇಶಕರ ಕಚೇರಿ (0821-2422096), ಜಿಲ್ಲಾಧಿಕಾರಿಗಳ ಕಚೇರಿ (0821-2424079), ವಿಪತ್ತು ನಿರ್ವಹಣಾ ಪ್ರಾಧಿಕಾರ (0821-2423800), ಸ್ಥಳೀಯ ಗ್ರಾಮ ಪಂಚಾಯತಿ/Uಐಃ ಕಚೇರಿ ಹಾಗೂ ಸಖಿ ಒನ್-ಸ್ಟಾಪ್ ಸೆಂಟರ್ ಫೋನ್ ಸಂಖ್ಯೆಗಳನ್ನು ಕಡ್ಡಾಯವಾಗಿ ಪ್ರದರ್ಶಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಿ.ಲಕ್ಷಿö್ಮಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.