Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾಂಗ್ರೆಸ್ ಪಕ್ಷವು ಶಾಲಾ- ಕಾಲೇಜುಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದೆ; ಶಿವಕುಮಾರ್


ಮೈಸೂರು: ಕಾಂಗ್ರೆಸ್ ಪಕ್ಷವು ಶಾಲಾ- ಕಾಲೇಜು ಆವರಣವನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಶೈಕ್ಷಣಿಕ ವಾತಾವರಣವನ್ನು ಕಲುಷಿತಗೊಳಿಸುತ್ತಿದೆ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,
ಮೈಸೂರಿನ ಮಹಾರಾಣಿ ಕಾಲೇಜು ಸಭಾಂಗಣದಲ್ಲಿ ಬುಧವಾರ ರಾಹುಲ್ ಗಾಂಧಿ ಅವರ ಬ್ಯಾನರ್ ಅಳವಡಿಕೆ ಹಾಗೂ ಫೋಟೋ ಪ್ರದರ್ಶನ ಮಾಡಿರುವುದು ಖಂಡನೀಯ ಎಂದಿದ್ದಾರೆ.
ಕರ್ನಾಟಕ ಶಿಕ್ಷಣ ಸಂಸ್ಥೆಗಳ ವರ್ಗೀಕರಣ ಮತ್ತು ನಿಯಂತ್ರಣ ಅಧಿನಿಯಮ- 1989ರ ಅನ್ವಯ, ಕಾಲೇಜು ಕ್ಯಾಂಪಸ್ ಗಳಲ್ಲಿ ರಾಜಕೀಯ ಚಟುವಟಿಕೆಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಶಾಲೆ- ಕಾಲೇಜು ಆವರಣವು ದೈನಂದಿನ ಪಾಠ ಪ್ರವಚನದೊಂದಿಗೆ ಪಠ್ಯೇತರ ಚಟುವಟಿಕೆಗಳು, ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಮತ್ತು ವ್ಯಾಯಾಮ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸದ್ವಿನಿಯೋಗ ಆಗಬೇಕೆಂದು ಸ್ಪಷ್ಟ ಮಾರ್ಗಸೂಚಿಯನ್ನು ಹಲವಾರು ಸುತ್ತೋಲೆಗಳ ಮೂಲಕ ಹೊರಡಿಸಲಾಗಿದೆ.
ಅದಾಗ್ಯೂ, ಕಾಂಗ್ರೆಸ್ ಶಾಸಕರ ಒತ್ತಡಕ್ಕೆ ಮಣಿದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಮಹಾರಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡಿರುವುದು ಸರ್ಕಾರದ ನೀತಿ- ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ.
ಕಾAಗ್ರೆಸ್ ಪಕ್ಷವು ರಾಜ್ಯ ಮತ್ತು ದೇಶಾದ್ಯಂತ ವಿದ್ಯಾರ್ಥಿಗಳನ್ನು ಬಳಸಿಕೊಂಡು ಚಿಲ್ಲರೆ ರಾಜಕೀಯ ಮಾಡುತ್ತಿರುವುದು ಮಹಾರಾಣಿ ಕಾಲೇಜಿನಲ್ಲಿ ನಡೆದ ವಿದ್ಯಮಾನದಿಂದ ಬಯಲಾಗಿದೆ. ಇಂತಹ ಷಡ್ಯಂತ್ರವನ್ನು ದೇಶದ ನಾಗರಿಕರು ಹಾಗೂ ವಿದ್ಯಾರ್ಥಿಗಳೇ ಹಿಮ್ಮೆಟ್ಟಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.