Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಾನೂ ಸಚಿವ ಸ್ಥಾನದ ಆಕಾಂಕ್ಷಿ; ಶಾಸಕ ಎ.ಆರ್.ಕೃಷ್ಣಮೂರ್ತಿ


ಮೈಸೂರು; ನಾನು ಮೂರನೇ ಬಾರಿ ಶಾಸಕನಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ಬಳಿ ಮನವಿ ಮಾಡಿದ್ದೇನೆ. ಚಾಮರಾಜನಗರ ಜಿಲ್ಲೆಯಲ್ಲಿ ರಾಜುಗೌಡ, ಮಹಾದೇವಪ್ರಸಾದ್, ಪುಟ್ಟರಂಗಶೆಟ್ಟಿ ಸೇರಿದಂತೆ ಅನೇಕರು ಸಚಿವರಾಗಿದ್ದಾರೆ. ಮೀಸಲು ಕ್ಷೇತ್ರದಿಂದ ಗೆದ್ದಿರುವ ನನಗೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡನೀಯ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂಬುದು ವಿದ್ಯಾರ್ಥಿಗಳ ಬೇಡಿಕೆ. ಈ ವಿಚಾರದಲ್ಲಿ ಬಿಜೆಪಿ ನಾಯಕರ ಸಮರ್ಥನೆ ಸರಿಯಿಲ್ಲ. ರಾಜಕೀಯ ಬಿಟ್ಟು ಮಾತನಾಡಬೇಕು ಎಂದರು.