Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಭಾರತದಲ್ಲಿ ಅರಾಜಕತೆಯ ಮೂಲಕ ಯಾವುದೇ ಕ್ರಾಂತಿ ಆಗುವುದಿಲ್ಲ; ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್


ಮೈಸೂರು: ಕಾಂಗ್ರೆಸ್‌ನವರು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆದರೆ ಭಾರತದಲ್ಲಿ ಅರಾಜಕತೆಯ ಮೂಲಕ ಯಾವುದೇ ಕ್ರಾಂತಿ ಆಗುವುದಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುತ್ತಮುತ್ತಲಿನ ರಾಷ್ಟçಗಳಲ್ಲಿ ಏನು ನಡೆದಿದೆಯೋ ಅದೇ ಮಾದರಿಯನ್ನು ಭಾರತದಲ್ಲಿಯೂ ಅನುಸರಿಸುತ್ತಿದ್ದಾರೆ. ಅಂತರರಾಷ್ಟಿçÃಯ ಷಡ್ಯಂತ್ರದ ಕಾರಣದಿಂದ ಹೀಗೆ ಹೋರಾಟ ನಡೆಸುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯ’ ಎಂದು ಕಿಡಿಕಾರಿದರು.
ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಏನೇ ಸಮಸ್ಯೆಗಳಿದ್ದಲ್ಲಿ ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕು. ಅದನ್ನು ಬಿಟ್ಟು ಕಾಂಗ್ರೆಸ್‌ನವರು ಬೀದಿಯಲ್ಲಿ ಚರ್ಚಿಸುತ್ತಿದ್ದಾರೆ. ಅವರು ಸಂಸತ್ತಿನಲ್ಲಿ ಚರ್ಚಿಸುವುದಿಲ್ಲ, ಅಲ್ಲಿ ಸರಿಯಾದ ರೀತಿಯಲ್ಲಿ ಪ್ರಕ್ರಿಯೆ ಪಾಲಿಸುವುದಿಲ್ಲ. ಹೊರಗಡೆ ಪ್ರತಿಭಟಿಸುವ ಮೂಲಕ ಜನರ ದಿಕ್ಕನ್ನು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿದ್ದು, ಜನರ ಆಕ್ರೋಶವು ವ್ಯಕ್ತವಾಗುವುದು ಮತದ ಮೂಲಕ ಮಾತ್ರವೇ. ಪಶ್ಚಿಮಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಏನೇನಾಯಿತು ಎಂಬುದನ್ನು ಎಲ್ಲರೂ ನೋಡಿದ್ದಾರೆ ಎಂದರು
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಕ್ಷಣವೇ ವಿಚಾರಣೆ ನಡೆಸಿ, ೧೩ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಹೊಸದಾದ ನೀತಿಯನ್ನೂ ರೂಪಿಸಲಾಗಿದೆ. ಸೂಕ್ತವಾದ ಪ್ರತಿಕ್ರಿಯೆಯನ್ನೂ ನೀಡಲಾಗಿದೆ.
ಮುಂದೆ ಪ್ರಶ್ನೆಪತ್ರಿಕೆ ಸೋರಿಕೆ ಆಗದಂತೆ ನೋಡಿಕೊಳ್ಳುವುದಕ್ಕೆ ಹಾಗೂ ಕೆಲವು ಬದಲಾವಣೆಗಳನ್ನು ತರಲು ಕ್ರಮ ವಹಿಸಲಾಗಿದೆ. ಜೊತೆಗೆ, ನೀಟ್ ಮರುಪರೀಕ್ಷೆ ನಡೆದು, ಫಲಿತಾಂಶವೂ ಪ್ರಕಟಗೊಂಡಿದೆ. ಇಷ್ಟೆಲ್ಲಾ ಆಗಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ ಮಾಡುವುದು ಸರಿಯಲ್ಲ. ಪ್ರಕರಣದ ತಪ್ಪಿತಸ್ಥರ ವಿರುದ್ಧ ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಕೇಂದ್ರ ಸರ್ಕಾರ ಮಾಡುತ್ತದೆ ಎಂದರು.
ವಿದ್ಯಾರ್ಥಿಗಳು, ಯುವಜನರು ದೆಹಲಿಯಲ್ಲಿ ಪ್ರಾಮಾಣಿಕ ಹೋರಾಟ ನಡೆಸುತ್ತಿದ್ದರು. ಅವರೊಂದಿಗೆ ಹಲವು ಗುಂಪುಗಳು ಸೇರಿಕೊಂಡಿವೆ. ಹೋರಾಟದ ವೇದಿಕೆಯನ್ನು ಕೆಲವು ಶಕ್ತಿಗಳು ದುರ್ಬಳಕೆ ಮಾಡಿಕೊಳ್ಳುತ್ತಿವೆ.
ದೇಶ ಹಾಗೂ ಸಮಾಜವನ್ನು ವಿಭಜಿಸುವಂತಹ ಕೆಲವು ಗುಂಪುಗಳು, ಎಡಪಂಥೀಯ ಭಾವನೆ ಇರುವಂತಹ ಗುಂಪುಗಳು ಹಾಗೂ ಕಾಂಗ್ರೆಸ್ ಕೂಡ ಸೇರಿಕೊಂಡು ನಡೆಸುತ್ತಿರುವ ಹೋರಾಟವು ಅರಾಜಕತೆ ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.