Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯರಿಂದ ನೂರಾರು ಮಂದಿ ಭಕ್ತರಿಗೆ ತಪ್ತ ಮುದ್ರಾಧಾರಣೆ


ಮೈಸೂರು; ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಮೈಸೂರಿನ ಸರಸ್ವತಿಪುರಂ ಶ್ರೀ ಕೃಷ್ಣಧಾಮ ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿತ್ತು. ಉಡುಪಿ ಪಲಿಮಾರು ಮಠದ ಸಂಸ್ಥಾನಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥಸ್ವಾಮೀಜಿಯವರು ಹಾಗೂ ಕಿರಿಯ ಶ್ರೀಗಳಾದ ವಿದ್ಯಾರಾಜೇಶ್ವರತೀರ್ಥಸ್ವಾಮ್ಭಿಜಿಯವರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು. ಬೆಳಗ್ಗಿನಿಂದಲೇ ಸಹಸ್ರಾರು ಭಕ್ತರು ಶ್ರೀಗಳಿಂದ ಮುದ್ರಾಧಾರಣೆ ಮಾಡಿ ಮಾತನಾಡಿದ ಶ್ರೀ ವಿದ್ಯಾಧೀಶ ತೀರ್ಥಸ್ವಾಮೀಜಿ, ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಿಂದ ಉತ್ಥಾನದ್ವಾದಶಿಯ ತನಕ ಶ್ರೀಮನ್ನಾರಯಣನು ಯೋಗನಿದ್ರೆಯಲ್ಲಿ ತೊಡಗುತ್ತಾನೆ ಅನ್ನೋ ನಂಬಿಕೆ ಇದೆ ಎಂದು ಹೇಳಿದರು.
ಮಳೆಗಾಲದಲ್ಲಿ ಸೊಳ್ಳೆ, ಕ್ರಿಮಿ ಕೀಟಗಳಿಂದ ಎದುರಾಗುವ ರೋಗ ರುಜಿನಗಳನ್ನು ಎದುರಿಸಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೂ ತಪ್ತ ಮುದ್ರಾಧಾರಣೆ ಪೂರಕವಾಗಲಿದೆ
ಚಾತುರ್ಮಾಸ್ಯಕ್ಕೆ ಕೂರುವ ಮೊದಲು ಗೃಹಸ್ಥರು ಹಾಗೂ ಯತಿಗಳು ತಪ್ತ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕು. ಅನಾನುಕೂಲವಾದವರು ಏಕಾದಶಿ ದಿನದ ಹೊರತಾಗಿಯೂ ಮುದ್ರಾ ಧಾರಣೆ ಮಾಡಿಸಿಕೊಳ್ಳಬಹುದು ಎಂದು ಹೇಳಿದರು
ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಶ್ರೀವತ್ಸ ಮಾತನಾಡಿ, ಬೆಳಿಗ್ಗಿನಿಂದಲೇ ಮಠಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ತೋಳಿಗೆ, ಎದೆಯ ಭಾಗಕ್ಕೆ ಹಾಗೂ ಹೊಟ್ಟೆಯ ಮೇಲೆ ಶಂಖ ಹಾಗೂ ಚಕ್ರದ ಮುದ್ರೆ ಹಾಕಿಸಿಕೊಂಡರು.
ಪ್ರತಿವರ್ಷವೂ ನಾನಾಕಡೆಗಳಿಂದ ಭಕ್ತರು ಆಗಮಿಸಿ ತಪ್ತ ಮುದ್ರೆಯನ್ನು ಹಾಕಿಸಿಕೊಳ್ಳುತ್ತಾರೆ. ಸುದರ್ಶನ ಹೋಮವನ್ನು ನಡೆಸಿ, ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದಾ , ಪದ್ಮ ಚಿಹ್ನೆಯನ್ನು ಎದೆಯ ಭಾಗ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಹೇಳಿದರು
ಇದಕ್ಕೂ ಮುನ್ನ ಮಠದಲ್ಲಿ ಸುದರ್ಶನ ಹೋಮ ನೆರೆವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಶ್ರೀಕೃಷ್ಣ ಮಿತ್ರ ಮಂಡಳಿಯ ಕಾರ್ಯದರ್ಶಿ ರಾಘವೇಂದ್ರ ರಾವ್, ಖಜಾಂಜಿ ಸುರೇಶ್ ರಾವ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತಿç, ಪಿ.ಎಸ್.ಶೇಖರ್, ಕಾರ್ಯದರ್ಶಿ ಕೆ.ವಿ.ಶ್ರೀಧರ್, ವಾಸುದೇವ್ ಭಟ್,ಕೃಷ್ಣ ದಾಸ್ ಪುರಾಣಿಕ್, ಸುಬ್ರಹ್ಮಣ್ಯ ತಂತ್ರಿ ಹಾಗೂ ಸದಸ್ಯರು ಇನ್ನಿತರರು ಹಾಜರಿದ್ದರು.