Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಇಂದು ಬೃಹತ್ ಬೈಕ್ ರ‍್ಯಾಲಿ
ಮೈಸೂರು:
ಮೈಸೂರು ಜಿಲ್ಲಾ ಮಾಜಿ ಸೈನಿಕರ ಸಂಘಗಳ ಒಕ್ಕೂಟ ಮತ್ತು ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಸಹಯೋಗದೊಂದಿಗೆ ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಜು.೨೬ರಂದು ಬೃಹತ್ ಬೈಕ್ ರ‍್ಯಾಲಿಯನ್ನು ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಗಿಲ್ ಯುದ್ದದಲ್ಲಿ ವೀರಮರಣ ಹೊಂದಿದ ದೇಶದ ಸೈನಿಕರನ್ನು ಸ್ಮರಿಸುತ್ತಾ, ಯುವಪೀಳಿಗೆಗೆ ದೇಶ ಪ್ರೇಮದ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಬೆಳಗ್ಗೆ ನಗರದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿದ ನಂತರ ಮೆಟ್ರೋಪೋಲ್ ವೃತ್ತದಿಂದ ಸುಮಾರು ೨೦೦ ಬೈಕ್‌ಗಳಲ್ಲಿ ರ‍್ಯಾಲಿ ನಡೆಯಲಿದೆ.
ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿ ಚಿಕ್ಕಮಾನಿಕೇತನ ಕಲ್ಯಾಣ ಮಂಟಪದಲ್ಲಿ ಕೊನೆಗೊಳ್ಳಲಿದೆ. ನಂತರ ಸಭಾಕಾರ್ಯಕ್ರಮ ನಡೆಯಲಿದೆ. ರೋಟರಿ ಜಿಲ್ಲೆ ೩೧೮೧ರ ನಿಯೋಜಿತ ಜಿಲ್ಲಾ ಗವರ್ನರ್ ಯಶಸ್ವಿ ಎಸ್. ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಶಾಸಕರಾದ ಕೆ.ಹರೀಶ್ ಗೌಡ, ಟಿ.ಎಸ್. ಶ್ರೀವತ್ಸ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.
ಇದೇ ವೇಳೆ ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಐವರು ಮಾಜಿ ಸೈನಿಕರಿಗೆ ಸನ್ಮಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ರೋಟರಿ ಕ್ಲಬ್ ಆಫ್ ಹೆರಿಟೇಜ್ ಅಧ್ಯಕ್ಷ ಆರ್.ಎನ್.ಶಿವಕುಮಾರ್, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ನಟರಾಜ್, ಕೊಡಗು ಗೌಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೊಂಬಾರನ ಸುಬ್ಬಯ್ಯ, ಕಿಶೋರ್ ಕದಂಬ, ಆರ್.ರಾಜೇಶ್ ಉಪಸ್ಥಿತರಿದ್ದರು.