ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ
ಮೈಸೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ವಿವಿಧ ಸಂಘಟನೆಗಳು, ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.
ನಗರದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಎದುರು ಸಮಾವೇಶಗೊಂಡ ಮುಖಂಡರು ಮೃತ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನವಾಗಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್. ಭಾಸ್ಕರ್ , ಒಂದು ದೇಶ ಒಂದು ಪರೀಕ್ಷೆ ಹೆಸರಿನಲ್ಲಿ ಪ್ರಾರಂಭವಾದ ನೀಟ್ ಪರೀಕ್ಷೆಯು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಕಳೆದ ಒಂದು ದಶಕದಲ್ಲಿ ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಅಘಾತಕಾರಿ ಎಂದರು.
ದೆಹಲಿಯ ಜಂತರಮAತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಪೋಷಕರ ಮೇಲೆ ಪೊಲೀಸರ ಸೋಗಿನಲ್ಲಿ ಗುಂಡಾಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಅದಕ್ಕೆ ಅವಕಾಶ ಕೊಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳನ್ನು ನಿರ್ಲಕ್ಷಿಸಿದ ಪರಿಣಾಮ ದೇಶಾದ್ಯಂತ ಅರಾಜಕತೆ ಸೃಷ್ಟಿಯಾಗಿದ್ದು, ರಾಷ್ಟçಪತಿ ಆಳ್ವಿಕೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಕೂಡಲೇ ನೀಟ್ ಪರೀಕ್ಷೆಯನ್ನು ರದ್ದು ಮಾಡಬೇಕು. ಸಿಇಟಿ ಮಾದರಿಯಲ್ಲಿ ಪರೀಕ್ಷೆ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಬೇಕು. ಹಾಗೆಯೇ ಎಲ್ಲ ಶಾಲಾ ಕಾಲೇಜುಗಳಲ್ಲಿ ಮೃತ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಬೇಕು. ಜತೆಗೆ ಯಾವ ಸಂದರ್ಭದಲ್ಲೂ ಎದೆಗುಂದದೆ ಆತ್ಮಹತ್ಯೆ ಮಾಡಿಕೊಳ್ಳದಂತೆ ಆತ್ಮಸ್ಥೆöÊರ್ಯ ತುಂಬಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ಪರೀಕ್ಷೆಯ ಅಕ್ರಮಗಳಿಂದ ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು ದಂಗೆ ಎದ್ದಿದ್ದಾರೆ. ವಿಶ್ವಗುರು ಪ್ರಧಾನಿ ನರೇಂದ್ರ ಮೋದಿಯವರಿಗೆ ಒಂದು ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ರಾಜ್ಯಗಳಿಗೆ ಸಿಇಟಿ ಪರೀಕ್ಷೆ ನಡೆಸಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹೆಡತಲೆ ಮಂಜುನಾಥ್, ನಾಯಕರ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ, ರಾಜ್ಯ ದಲಿತ ವೇದಿಕೆ ಅಧ್ಯಕ್ಷ ನಾಗನಹಳ್ಳಿ ರೇವಣ್ಣ, ಮಹರ್ಷಿ ವಾಲ್ಮೀಕಿ ಸಂಘದ ರಾಜ್ಯಾಧ್ಯಕ್ಷ ಸತ್ಯನಾರಾಯಣ, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಮಹಿಳಾ ಅಧ್ಯಕ್ಷೆ ಮಂಜುಳಾ, ನಗರಾಧ್ಯಕ್ಷ ಜೆ.ಪ್ರಭು ಮುಂತಾದವರು ಹಾಜರಿದ್ದರು.
--°C
Mysore, IN
Loading...