Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಅರೆ ಬೆತ್ತಲೆ ಪ್ರತಿಭಟನೆ


ಮೈಸೂರು; ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಅರೆ ಬೆತ್ತಲೆ ಚಳುವಳಿ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಹಕ್ಕು ಒತ್ತಾಯ ಸಲ್ಲಿಸಿದರು.
ರಾಜ್ಯದಲ್ಲಿ ಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದ್ದು, ಜಾನುವಾರುಗಳಿಗೆ ಮೇವು ನೀರು, ಜನರಿಗೆ ಕುಡಿಯಲು ನೀರು ಸಾಕಷ್ಟು ಇಲ್ಲ. ಹಾಕಿರುವ ಬೆಳೆ ರಾಗಿ, ಜೋಳ, ಮೆಕ್ಕೆಜೋಳ, ಹತ್ತಿ, ಸೂರ್ಯಕಾಂತಿ ಸಹ ನಷ್ಟವಾಗಿದೆ. ಅಂತರ್ಜಲ ಕುಸಿತದಿಂದ ಕೃಷಿ ಪಂಪು ಸೆಟ್ಟುಗಳಲ್ಲಿ ಸಹ ನೀರು ನಿಂತುಹೋಗಿದೆ ಇದರಿಂದ ಬೆಳೆದಿರುವಂತಹ ಕಬ್ಬು ಬಾಳೆ ಹರಿಶಿಣ. ತೆಂಗು. ಇಳುವರಿಯಲ್ಲಿ ನಷ್ಟವೆ ಹೊಂದಿವೆ. ಆದ್ದರಿಂದ ತಕ್ಷಣ ಬರಪೀಡಿತ ಘೋಷಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಎನ್ ಡಿ ಆರ್ ಎಫ್. ಮತ್ತು ಎಸ್ ಡಿ ಆರ್ ಎಫ್ ಮಾನದಂಡಗಳನ್ನು ಬದಲಾಯಿಸಿ, ವೈಜ್ಞಾನಿಕ ಬೆಳೆ ನಷ್ಟ ಪರಿಹಾರವನ್ನು ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಬೆಳೆ ನಷ್ಟ ಘೋಷಣೆ ಮಾಡಬೇಕು ಇದರಿಂದ ರೈತರ ಬದುಕು. ಜೀವನ ಉಳಿಯುವಂತಾಗುತ್ತದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಜ್ಯ ಸರ್ಕಾರ ವ್ಯಾಪ್ತಿ ಬರುವ ಸುಮಾರು 25,000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 30,000 ಕೋಟಿ ರೂಪಾಯಿಯ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಕೇಂದ್ರ ಸರ್ಕಾರ ಬರಗಾಲ ಜಿಲ್ಲೆಗಳ ರಾಷ್ಟಿçÃಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಬೇಕು. ಖಾಸಗಿ ಫೈನಾನ್ಸ್ಗಳ ಅಟ್ಟಹಾಸ ಮುಂದುವರೆದಿದ್ದು, ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ ನೀಡುತ್ತಿದೆ ಇದು ನಿಲ್ಲಬೇಕು. ಗ್ರಾಮ ಪಂಚಾಯತ್ ಮಟ್ಟ ದಲ್ಲಿ ಮೇವು ಬ್ಯಾಂಕು ಸ್ಥಾಪನೆ ಆಗಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಮಂತ್ರಿಗಳು ತಕ್ಷಣ ರೈತ ಮುಖಂಡರ ಸಭೆಯನ್ನು ನಡೆಸಬೇಕು. ಕೇಂದ್ರ ಸರ್ಕಾರವು ನಿಯೋಗವನ್ನು ರಾಜ್ಯಕ್ಕೆ ಕಳುಹಿಸಿ, ಬರ ಅಧ್ಯಯನ ನಡೆಸಿ, ವಿಶೇಷ ಪ್ಯಾಕೇಜ್ ನೀಡಬೇಕೆಂದು ಒತ್ತಾಯಿಸಿದರು.
ಈ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳಿಗೆ ಕಪುö್ಪ ಬಾವುಟ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಬಣ್ಣಾರಿ ಅಮ್ಮನ್ ಕಾರ್ಖಾನೆ ಮಾಲೀಕರ ಜೊತೆ ಸಭೆ ಮಾಡಿ, ಕಬ್ಬು ಬೆಳೆಗಾರರಿಗೆ ಹಣ ಕೊಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು.
ಪ್ರತಿಭಟನೆಯಲ್ಲಿ ಕೆರೆಹುಂಡಿ ರಾಜಣ್ಣ, ಒಳಗೆರೆ ಗಣೇಶ್, ಪ್ರಕಾಶ್ ಗಾಂಧಿ, ಮಲಿಯೂರು ಮಹೇಂದ್ರ, ಜೆಸಿಬಿ ಚಿದಂಬರ, ಮುದ್ದಾಹಳ್ಳಿ ಮಧು U್ಷಡಿಕೆ, ಶಿವಣ್ಣ, ಸುರಪತಿ ನಾಗಣ್ಣ, ಪುಟ್ಟ ಸೋಮಣ್ಣ, ಜಗದೀಶ್, ಸುಜಲೂರು ಜಯಸ್ವಾಮಿ, ಗುರುವಿನ ಪುರ ಚಂದ್ರಪ್ಪ , ರೇವಣ್ಣ, ದೀಪಕ್, ಮುಕುಡಹಳ್ಳಿ ರಾಜು, ಸಿದ್ದಬಸಪ್ಪ , ಪ್ರಭುಸ್ವಾಮಿ, ಪುಟ್ಟಸ್ವಾಮಿ, ಕುರುಬರ ಹುಂಡಿ ಸಿದ್ದಯ್ಯನುಂಡಿ ಪ್ರಕಾಶ್, ಮಧು ಮಾದಾಪುರ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.