Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಯುವಪೀಳಿಗೆಯ ಸಹಕಾರ ಅಗತ್ಯ: ಡಾ. ಯತೀಂದ್ರ ಸಿದ್ದರಾಮಯ್ಯ


ಮೈಸೂರು: ಮಾದಕ ವಸ್ತು ನಿರ್ಮೂಲನೆಗೆ ಕೇವಲ ಸರ್ಕಾರ ಮತ್ತು ಪೊಲೀಸರು ಮಾತ್ರ ಹೋರಾಟ ಮಾಡಿದರೆ ಸಾಲದು, ಯುವಪೀಳಿಗೆಯೂ ಸಹ ಸಹಕರಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸೋಮವಾರ ಮೈಸೂರಿನ ನಗರ ಪೊಲೀಸ್ ಮತ್ತು ಟೆರಿಷಿಯನ್ ಕಾಲೇಜು ಎನ್.ಎಸ್.ಎಸ್ ಘಟಕ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಮಾಜದ ಭವಿಷ್ಯವಿರುವುದು ಯುವ ಜನತೆಯಲ್ಲಿ, ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ದೃಢವಿದ್ದಾಗ ಮಾತ್ರ ನಮ್ಮ ದೇಶ ಯಶಸ್ಸು ಕಾಣಲು ಸಾಧ್ಯ ಎಂದು ತಿಳಿಸಿದರು.
ಪ್ರಸ್ತುತ ದಿನಗಳಲ್ಲಿ ಕೇವಲ ನಗರ ಪ್ರದೇಶಗಳಲ್ಲದೆ, ಗ್ರಾಮೀಣ ಭಾಗದಲ್ಲಿಯೂ ಸಹ ಜನರು ಮಾದದ ದ್ರವ್ಯಗಳಿಗೆ ದಾಸರಾಗಿರುವುದನ್ನು ಕಾಣಬಹುದಾಗಿದೆ. ಮಾದಕ ವಸ್ತುಗಳ ವ್ಯಸನಗಳಿಂದ ಮುಕ್ತಗೊಳಿಸುವ ಉದ್ದೇಶದಿಂದ ನಮ್ಮ ಸರ್ಕಾರ ಮತ್ತು ಪೊಲೀಸ್ ಇಲಾಖೆ ಹಲವಾರು ಯೋಜನೆಗಳನ್ನು ಹಾಗೂ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಇಡೀ ರಾಜ್ಯವನ್ನು ಮಾದಕ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವುದು ನಮ್ಮ ಗುರಿ ಎಂದರು.
ಶಾಲೆ ಮತ್ತು ಕಾಲೇಜುಗಳಲ್ಲಿ ನಿಯಮಿತವಾಗಿ ‘ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ’ಗಳನ್ನು ನಡೆಸಬೇಕು. ಮಾದಕ ವಸ್ತುಗಳ ಮಾರಾಟ ಅಥವಾ ಬಳಕೆಯ ಬಗ್ಗೆ ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಉತ್ತೇಜಿಸಬೇಕು. ವ್ಯಸನಕ್ಕೆ ತುತ್ತಾದವರನ್ನು ಅಪರಾಧಿಗಳಂತೆ ನೋಡದೆ, ಸೂಕ್ತ ಕೌನ್ಸೆಲಿಂಗ್ ಹಾಗೂ ವೈದ್ಯಕೀಯ ಚಿಕಿತ್ಸೆ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರಿ ಮಟ್ಟದಲ್ಲಿ ಉಚಿತ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಹೇಳಿದರು.
ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಮಾತನಾಡಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವ ಆಲೋಚನೆ ಮಾಡುವಂತಹ ಸಂದರ್ಭ ಇದಾಗಿದೆ. ಇಂದಿನ ಯುವಜನತೆ ನಮ್ಮ ದೇಶದ ಆಸ್ತಿ. ಆದರೆ ನಮ್ಮ ಅನೇಕ ಯುವಕ-ಯುವತಿಯರು ಕ್ಷಣಮಾತ್ರದ ಸಂತೋಷಕ್ಕಾಗಿ ಮಾದಕ ದ್ರವ್ಯಗಳ ದಾಸರಾಗಿ ತಮ್ಮ ಸುಂದರ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಇಂದು ನಾವು ರೈಸ್’ ಮತ್ತು ‘ಬೇಡ ಬ್ರೋ’ ಎಂಬ ಜಾಗೃತಿ ಅಭಿಯಾನಗಳನ್ನು ಆರಂಭಿಸಿದ್ದೇವೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯು 2028 ರ ವೇಳೆಗೆ ‘ಮಾದಕ ವಸ್ತು ಮುಕ್ತ ಕರ್ನಾಟಕ’ ನಿರ್ಮಿಸುವ ಮಹತ್ವಾಕಾಂಕ್ಷೆಯ ಗುರಿ ಹೊಂದಿದೆ. ಅದೇ ಹಾದಿಯಲ್ಲಿ ನಾವೂ ಸಹ ಕಳೆದ ಒಂದು ವರ್ಷದಿಂದ ನಮ್ಮ ಜಿಲ್ಲೆಯನ್ನು ಮಾದಕ ವಸ್ತು ಮುಕ್ತವಾಗಿಸಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದು ಹೇಳಿದರು.
ಈ ಅಭಿಯಾನದಲ್ಲಿ ನಾವು ಮುಖ್ಯವಾಗಿ ಯುವಜನತೆಯನ್ನು (ವಿದ್ಯಾರ್ಥಿಗಳನ್ನು) ಗಮನದಲ್ಲಿಟ್ಟುಕೊಂಡಿದ್ದೇವೆ. , ಕೇವಲ ಕುತೂಹಲಕ್ಕಾಗಿ ‘ಒಮ್ಮೆ ಮಾದಕ ವಸ್ತು ಸೇವನೆಗೆ ಯತ್ನಿಸಿ ನೋಡೋಣ’ ಎಂಬ ಮನಸ್ಥಿತಿಯಿಂದ ಆರಂಭವಾಗುವ ಈ ಅಭ್ಯಾಸ, ಕಾಲಕ್ರಮೇಣ ವ್ಯಕ್ತಿಯನ್ನು ಸಂಪೂರ್ಣವಾಗಿ ಅದಕ್ಕೆ ದಾಸನನ್ನಾಗಿ ಮಾಡುತ್ತದೆ .ಈ ದುರಂತವನ್ನು ತಡೆಯಲು ನಾವು ಪ್ರತಿಯೊಂದು ಕಾಲೇಜನ್ನು ಗುರುತಿಸಿ, ಅಲ್ಲಿ ಕಡ್ಡಾಯವಾಗಿ ‘ಆಂಟಿ-ಡ್ರಗ್ ಕಮಿಟಿ’ (ಮಾದಕ ದ್ರವ್ಯ ತಡೆ ಸಮಿತಿ) ಇರಲೇಬೇಕು ಎಂದು ನಿಯಮಿಸಿ, ಸಮಿತಿಗಳನ್ನು ಯಶಸ್ವಿಯಾಗಿ ಸ್ಥಾಪಿಸಿದ್ದೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ್ ರೆಡ್ಡಿ.ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಕಾನೂನು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರಾದ ಡಾ. ಹರ್ಷ ಪ್ರಿಯಂವದಾ, ಅಪರಾಧ ಮತ್ತು ಸಂಚಾರದ ಉಪ ಪೊಲೀಸ್ ಆಯುಕ್ತ ಕೆ.ಎಸ್ ಸುಂದರ್ ರಾಜ್, ಟೆರಿಷಿಯನ್ ಕಾಲೇಜಿನ ನಿರ್ದೇಶಕ ರೆವೆರೆಂಡ್ ಡಾ. ಸಿಸ್ಟರ್ ಪ್ರಪುಲ್ಲಾ ಹಾಗೂ ಟೆರಿಷಿಯನ್ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆವೆರೆಂಡ್ ಸಿಸ್ಟರ್ ಅಂಜಲಿ ಉಪಸ್ಥಿತರಿದ್ದರು.