ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರ ಕೂಡಲೇ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಮೈಸೂರು; ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳ ಕಾಲ 3500 ಕೂಸಸ್ ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರ ಕೂಡಲೇ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.ಮಂಗಳವಾರ ಮೈಸೂರಿನ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಕೊಳ್ಳದ ರೈತರ ಹಿತವನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಾವೇರಿ ಕೊಳ್ಳದಲ್ಲಿ ಎಷ್ಟು ನೀರಿದೆ ಎಂಬ ಮಾಹಿತಿಯಿದ್ದರೂ,…