Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರ ಕೂಡಲೇ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು; ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳ ಕಾಲ 3500 ಕೂಸಸ್ ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರ ಕೂಡಲೇ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಮಂಗಳವಾರ ಮೈಸೂರಿನ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಕೊಳ್ಳದ ರೈತರ ಹಿತವನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಾವೇರಿ ಕೊಳ್ಳದಲ್ಲಿ ಎಷ್ಟು ನೀರಿದೆ ಎಂಬ ಮಾಹಿತಿಯಿದ್ದರೂ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಹೊರಬರುವ ಮೊದಲೇ ತಮಿಳುನಾಡಿಗೆ ನೀರು ಹರಿಸಿದ್ದಾರೆ. ಪ್ರಾಧಿಕಾರದ ಮುಂದೆ ಸಮರ್ಥವಾಗಿ ವಾದ ಮಂಡಿಸದ ಪರಿಣಾಮವಾಗಿ ಪ್ರಾಧಿಕಾರವು ಈ ರೀತಿಯ ಆದೇಶವನ್ನು ಹೊರಡಿಸಿದೆ. ಈಗಲಾದರೂ ಮುಖ್ಯಮಂತ್ರಿಗಳು ಎಚ್ಚೆತ್ತುಕೊಂಡು, ರೈತರ ಹಿತ ಕಾಪಾಡಲು ಮುಂದಾಗಬೇಕು, ಪ್ರಾಧಿಕಾರದ ಮುಂದೆ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿ, ಸಮರ್ಥವಾದ ವಾದವನ್ನು ಮಂಡಿಸಬೇಕು ಎಂದು ಆಗ್ರಹಿಸಿದರು.
ಸಚಿವ ಸಂಪುಟ ವಿಸûರಣೆಯ ಗೊಂದಲದಲ್ಲಿಯೇ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಂಡಿದ್ದಾರೆ. ರೇಟ್ ಫಿಕ್ಸ್ ಆಗದೆ ಸಚಿವ ಸ್ಥಾನ ಸಿU್ಪದಂತಾಗಿದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆಯಾಗುತ್ತಿಲ್ಲ, ಇದು ರಾಜ್ಯದ ಆಡಳಿತದ ಮೇಲೆ ಪರಿಣಾಮವನ್ನು ಬೀರುತ್ತಿದೆ. ಮುಖ್ಯಮಂತ್ರಿಗಳು ಮನೆಗೆ ಮಾರಿ, ಪರರಿಗೆ ಉಪಕಾರಿ ಎಂಬAತೆ ಯಾರನ್ನೋ ಖುಷಿಪಡಿಸಲು ಕಾವೇರಿ ನೀರನ್ನು ಹರಿಸುತ್ತಿದ್ದಾರೆ. ಆ ಮೂಲಕ ನಮ್ಮ ರಾಜ್ಯದ ರೈತರಿಗೆ ವಿಷವುಣ್ಣಿಸುತ್ತಿದ್ದಾರೆ. ಸರ್ಕಾರದ ಕ್ರಮವನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಕೂಡ ರೈತರ ಪರವಾಗಿದ್ದೇವೆ, ರೈತರೊಂದಿಗೆ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ಈ ವೇಳೆ ಬಿಜೆಪಿ ಮಾಜಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಹಾಲಿ ಅಧ್ಯಕ್ಷ ಕುಂಬ್ರಳ್ಳಿ ಎನ್.ಸುಬ್ಬಣ್ಣ ಮತ್ತಿತರರು ಉಪಸ್ಥಿತರಿದ್ದರು.