Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾವೇರಿ ನೀರು ನಿರ್ವಹಣಾ ಮಂಡಳಿಯ ಆದೇಶದಂತೆ ದಿನನಿತ್ಯ 3500 ಕೂಸಸ್ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ; ಕುರುಬೂರು ಶಾಂತಕುಮಾರ್


ಮೈಸೂರು; ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳ ಕಾಲ 3500 ಕೂಸಸ್ ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಪ್ರಸಕ್ತ ಸನ್ನಿವೇಶದಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಾದ ಕೆ.ಆರ್.ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿಗಳಲ್ಲಿ ಪ್ರಸ್ತುತ ಇರುವ ನೀರು ನಮ್ಮ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಳಿಗೆ ರೈತರ ಬೆಳೆಗಳ ರಕ್ಷಣೆಗೆ ಮಾತ್ರ ಇದೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ನೀರನ್ನೇ ನೆಚ್ಚಿಕೊಂಡಿರುವ ನಗರಗಳು ಮತ್ತು ಗ್ರಾಮಗಳ ಕುಡಿಯುವ ನೀರಿನ ಅಭಾವವನ್ನು ನೀಗಿಸುವುದು ನಮ್ಮ ಮೊದಲ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.
ಜಲಾನಯನ ಪ್ರದೇಶಗಳಲ್ಲಿ ಶೇಕಡ 50ರಷ್ಟು ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದರಿಂದ ಜಲಾಶಯಗಳಿಗೆ ಹರಿದುಬರುವ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. “ಕರ್ನಾಟಕವು ಯಾವಾಗಲೂ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ಪ್ರಾಧಿಕಾರದ ಆದೇಶಗಳನ್ನು ಗೌರವಿಸುತ್ತಾ ಬಂದಿದೆ. ಆದರೆ, ಈಗರಾಜ್ಯದ ಜನರ ಕುಡಿಯುವ ನೀರು ಮತ್ತು ರೈತರ ಹಿತಾಸಕ್ತಿಯನ್ನು ಬಲಿ ಕೊಟ್ಟು ನೀರು ಹರಿಸಲು ಸಾಧ್ಯವಿಲ್ಲ. ಸಂಕಷ್ಟ ಸೂತ್ರದ ಆಧಾರದ ಮೇಲೆ ಪ್ರಸ್ತುತ ಪರಿಸ್ಥಿತಿಯನ್ನು ಮರುಪರಿಶೀಲಿಸುವಂತೆ ಪ್ರಾಧಿಕಾರ ಮಂಡಳಿಗೆ ರಾಜ್ಯ ಸರ್ಕಾರ ಮನವಿ ಮಾಡಬೇಕು. ಕರ್ನಾಟಕದ ಹಿತಾಸಕ್ತಿ, ರೈತರ ಬದುಕು ಹಾಗೂ ಕುಡಿಯುವ ನೀರಿನ ಭದ್ರತೆಯನ್ನು ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಬೇಕು ಎಂದು ಆಗ್ರಹಿಸಿದ್ದಾರೆ.