Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಬೇಕು ; ನಿತೇಶ್ ಪಾಟೀಲ್

ಮೈಸೂರು: ಮೈಸೂರು ಭಾಗದಲ್ಲಿರುವ ಜಲಾಶಯಗಳ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಬೇಕು ಎಂದು ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿಯ ಅಧ್ಯಕ್ಷರು ಹಾಗೂ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಸರ್ಕಾರದ ಜಲಸಂಪನ್ಮೂಲ ಇಲಾಖೆಯು ಸೂಚಿಸಿರುವಂತೆ ಪ್ರಸಕ್ತಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿರುವ್ಯದರಿಂದ, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುತ್ತಿರುವ ಹಿನ್ನಲೆಯಲ್ಲಿ, ರಾಷ್ಟಿçÃಯ ಹಾಗೂ ಜಲನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾದ ಕಾರಣ ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ತೊಂದರೆ ಉಂಟಾಗದAತೆ ಕಾಯ್ದಿರಿಸಿಕೊಂಡು ಬಳಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಮುಂಬರುವ ದಿನಗಳಲ್ಲಿ ಎಲ್-ನಿನೊ ಪರಿಣಾಮದಿಂದ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆಯು ಸೂಚನೆ ನೀಡಿರುವುದರಿಂದ ರಾಜ್ಯದ ಹಲವು ಕಡೆ ಬರ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ” ಜಲಾಶಯ ನಂಬಿಕೊAಡು ಯಾವ ರೈತರೂ ಬೆಳೆ ಹಾಕಬೇಡಿ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಈ ಎಲ್ಲಾ ಅಂಶಗಳ ಹಿನ್ನಲೆಯಲ್ಲಿ ಮೈಸೂರು ವಿಭಾಗದ ಕುಡಿಯುವ ನೀರಿನ ಯೋಜನೆಯ ಸಮಿತಿಯಡಿಯಲ್ಲಿ ಬರುವ ಜಲಾಶಯಗಳಾದ ಕೃಷ್ಣರಾಜಸಾಗರ, ಕಬಿನಿ, ಹಾರಂಗಿ, ಹೇಮಾವತಿ, ಭದ್ರಾ, ನುಗು, ತಾರಕ, ಸುವರ್ಣಾವತಿ, ಚಿಕ್ಕಿಹೊಳೆ, ಗುಂಡಾಲ್, ಉಡುತೊರೆಹಳ್ಳ, ವಾಟೆಹೊಳೆ ಮತ್ತು ಯಗುಚಿ ಜಿಲಾಶಯಗಳಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಲು ಹಾಗೂ ರೈತ ಬಾಂಧವರು ಜಿಲಾಶಯದ ನೀರನ್ನು ಅವಲಂಬಿಸಿರುವ ಬೆಳೆಗಳನ್ನು ಬೆಳೆಯದಂತೆ ಹಾಗೂ ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಕೃಷಿ ಇಲಾಖಾ ಅಧಿಕಾರಿಗಳು ನೀಡುವ ಸಲಹೆಯಂತೆ ಮಳೆ ಆಶ್ರಿತ ಬೆಳೆಗಳನ್ನು ಬೆಳೆಯುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.