Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾ ಹಿನ್ನಲೆ ಕ್ರೀಡಾಂಗಣಗಳ ಪರಿಶೀಲನೆ


ಮೈಸೂರು; ನಾಡ ಹಬ್ಬ ಮೈಸೂರು ದಸರಾ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳು ನಡೆಯುವ ಚಾಮುಂಡಿ ವಿಹಾರ್ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕ್ರೀಡಾಂಗಣಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್ ಅನುಚೇತ್ ಪರಿಶೀಲಿಸಿದರು.
ಈ ಬಾರಿ ದಸರಾ ಕ್ರೀಡೆಯಲ್ಲಿ ಯಾವುದೇ ನ್ಯೂನತೆ ಉಂಟಾಗದAತೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಕ್ರೀಡಾಂಗಣದಲ್ಲಿರುವ ದುರಸ್ಥಿ ಕಾಮಗಾರಿಗಳಿದ್ದಲ್ಲಿ ಕೂಡಲೇ ಕೈಗೊಂಡು ಪೂರ್ಣಗೊಳಿಸಿ ಎಂದರು.
ಪರಿಶೀಲನೆಯ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ಉಪಸ್ಥಿತರಿದ್ದರು