Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧ


ಮೈಸೂರು: ಆಷಾಢ ಮಾಸದ ಶುಕ್ರವಾರಗಳ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಆಗಮಿಸುವ ಸಾವಿರಾರು ಭಕ್ತಾದಿಗಳಿಗೆ ಸುರಕ್ಷಿತ, ಶಾಂತಿಯುತ ಮತ್ತು ಸುಗಮ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತವು ವಿಶೇಷ ಸಂಚಾರ ಮತ್ತು ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಿದೆ.
ಶಿಷ್ಟಾಚಾರದ ವ್ಯಾಪ್ತಿಗೆ ಒಳಪಡುವ ವಾಹನಗಳನ್ನು ಹೊರತುಪಡಿಸಿ, ಉಳಿದ ಯಾವುದೇ ಇತರೆ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳಿಗೆ ಅಷಾಢ ಶುಕ್ರವಾರ ಚಾಮುಂಡಿ ಬೆಟ್ಟ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ವಾಹನ ಪ್ರವೇಶಕ್ಕೆ ಸಂಬAಧಿಸಿದAತೆ ಸಲ್ಲಿಸಲಾಗುವ ಯಾವುದೇ ರೀತಿಯ ಶಿಫಾರಸ್ಸು ಪತ್ರಗಳನ್ನು ಪರಿಗಣಿಸುವುದಿಲ್ಲ ಮತ್ತು ಅವುಗಳ ಆಧಾರದ ಮೇಲೆ ಪ್ರವೇಶಾವಕಾಶ ನೀಡುವುದಿಲ್ಲ. ಭಕ್ತರಿಗೆ ಅನುಕೂಲವಾಗುವಂತೆ ಹಾಗೂ ದರ್ಶನ ವ್ಯವಸ್ಥೆಯನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಮತ್ತು ಭಕ್ತಾದಿಗಳು ಜಿಲ್ಲಾಡಳಿತದ ನಿಯಮಾವಳಿಗಳಿಗೆ ಬದ್ಧರಾಗಿ ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಜಿ.ಲಕ್ಷಿö್ಮಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ