
ಮೈಸೂರು: ಸೂಕ್ಷö್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ವತಿಯಿಂದ ಶ್ರೀ ಗಂಗಾ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಉದ್ಯಮಶೀಲತೆ ಮತ್ತು ಕೈಗಾರಿಕಾ ಪ್ರೇರಣೆ ಕುರಿತು ಉದ್ಯಮಶೀಲತಾ ಅರಿವು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
100ಕ್ಕೂ ಹೆಚ್ಚು ಯುವಕರು, ಮಹಿಳೆಯರು, ಉದ್ಯಮ ಆರಂಭಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಎAಎಸ್‌ಎAಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಸಹಾಯಕ ನಿರ್ದೇಶಕ ಶಿವಕುಮಾರ್ ಎ. ಅವರು ಇಲಾಖೆಯ ವಿವಿಧ ಯೋಜನೆಗಳು, ಉದ್ಯಮಿಗಳಿಗೆ ದೊರೆಯುವ ಸೇವೆಗಳು, ಸರ್ಕಾರದ ಪ್ರೋತ್ಸಾಹ ಧನ, ಸಾಲ ಸೌಲಭ್ಯಗಳು, ಕೌಶಲ್ಯಾಭಿವೃದ್ಧಿ ತರಬೇತಿಗಳು ಹಾಗೂ ಹೊಸ ಉದ್ಯಮ ಸ್ಥಾಪನೆಗೆ ಇಲಾಖೆಯು ನೀಡುತ್ತಿರುವ ಬೆಂಬಲದ ಕುರಿತು ಸಮಗ್ರ ಮಾಹಿತಿ ನೀಡಿದರು.
ಪ್ರೇರಣಾದಾಯಕ ವಾಗ್ಮಿ ಶ್ರೀಕಾಂತ್ ಎಂ. ಅವರುಯುವಕರು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು, ಗುರಿ ನಿಗದಿಪಡಿಸಿಕೊಂಡು ನಿರಂತರ ಪರಿಶ್ರಮದಿಂದ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಬೇಕು ಎಂದು ಕರೆ ನೀಡಿದರು.
ಶ್ರೀ ಗಂಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷö ರಾಜ್ ಕಾಮಯ್ಯ ಅವರು ತಮ್ಮ ಟ್ರಸ್ಟ÷್ನ ವಿವಿಧ ಸಾಮಾಜಿಕ ಹಾಗೂ ಉದ್ಯಮಶೀಲತಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯದರ್ಶಿ ದಿವ್ಯಶ್ರೀ ಎಂ ಸ್ವಾಗತಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಿ, ಯೋಜನೆಗಳು, ಉದ್ಯಮ ಆರಂಭಿಸುವ ವಿಧಾನ, ಹಣಕಾಸು ನೆರವು ಹಾಗೂ ಸರ್ಕಾರಿ ಸೌಲಭ್ಯಗಳ ಕುರಿತು ಅವರ ಪ್ರಶ್ನೆಗಳಿಗೆ ತಜ್ಞರು ಉತ್ತರ ನೀಡಿದರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು