Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ, ರೈತ ಸಂಘ, ಕಬ್ಬು ಬೆಳೆಗಾರರ ಸಂಘ, ಕಬಿನಿ ರೈತ ಹಿತಾರಕ್ಷಣಾ ಸಮಿತಿ, ಕರ್ನಾಟಕ ಸೇನಾಪಡೆಯಿಂದ ಪ್ರತಿಭಟನೆ
ಮೈಸೂರು; ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶಿಸಿರುವುದನ್ನು ವಿರೋಧಿಸಿ ಬುಧವಾರ ನಗರದಲ್ಲಿ ರೈತ ಸಂಘ, ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ಸೇನಾಪಡೆಯಿಂದ ವಿವಿಧೆಡೆ ಪ್ರತಿಭಟನೆಯನ್ನು ನಡೆಸಲಾಯಿತು.
ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪುನರ್ ಪರಿಶೀಲನೆ ಆಗಬೇಕೆಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ಮೈಸೂರು ಊಟಿ ಹೆದ್ದಾರಿ ರಸ್ತೆ ತಡೆ ಚಳುವಳಿ ಮಾಡಿದರು.
ಕಬಿನಿ, ಕಾವೇರಿ ನಮ್ಮದು ,ಬಿಡಬೇಡಿ, ಬಿಡಬೇಡಿ ನೀರು ಬಿಡಬೇಡಿ ಎಂದು ಘೋಷಣೆ ಕೂಗುತ್ತಾ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಲು ಯತ್ನಿಸಿದಾಗ ಪೊಲೀಸರು ಅಡ್ಡಿಪಡಿಸಲು ಯತ್ನಿಸಿದರೂ ಲೆಕ್ಕಿಸದೆ ಖಾಲಿ ಬಿಂದಿಗೆ ಹಿಡಿದು, ಕೈಗೆ ಕಪುö್ಪಬಟ್ಟಿ ಕಟ್ಟಿಕೊಂಡು ಧಿಕ್ಕಾರ ಕೂಗಿ , ರಸ್ತೆ ತಡೆ ನಡೆಸಿದರು. ಇದರಿಂದಾಗಿ ನೂರಾರು ವಾಹನಗಳು ರಸ್ತೆಯಲ್ಲಿ ನಿಂತವು. ಆಂಬುಲೆನ್ಸ್ ಬಂದಾಗ ಗಮನಿಸಿದ ಮುಖಂಡರು ಮಾನವೀಯತೆಯಿಂದ ಅದಕ್ಕೆ ಜಾಗ ಮಾಡಿಕೊಟ್ಟರು.
ಈ ವೇಳೆ ಚಳುವಳಿ ನೇತೃತ್ವ ವಹಿಸಿದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ಮಾತನಾಡಿ, ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ರಾಜ್ಯದ ನೀರಾವರಿ ಸಚಿವ ರಾಮಲಿಂಗ ರೆಡ್ಡಿ ಅವರು ಕಾವೇರಿ ಅಚ್ಚುಕಟ್ಟು ಭಾಗದ ಸಮಸ್ಯೆ ಬಗೆ ವಾಸ್ತವ ಸಂಗತಿ ಮಂಡಿಸಿಲ್ಲ. ಇವರ ನಿರ್ಲಕ್ಷತನ ನೀರು ಬಿಡುವಂತೆ ಆದೇಶ ಬರಲು ಕಾರಣವಾಯಿತು. ಕೂಡಲೇ ಕಾವೇರಿ ಪ್ರಾಧಿಕಾರದ ಮುಂದೆ ಪುನರ್ ಪರಿಶೀಲನ ಅರ್ಜಿ ಸಲ್ಲಿಸಲಿ. ಯಾವುದೇ ಕಾರಣಕ್ಕೂ ನೀರು ಬಿಡಬಾರದು, ನೀರು ಹರಿಸಿದರೆ ಕಾವೇರಿಕೊಳ್ಳದ ರೈತರು ಸಂಘ ಸಂಸ್ಥೆಗಳು ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಎಂ ಬಿ ಪಾಟೀಲ್ ನಂತಹ ಕೆಲವು ಸಚಿವರು ನೀರು ಬಿಡಬೇಕಾಗುತ್ತದೆ ಎಂದು ಲಘುವಾಗಿ ಹೇಳುತ್ತಿದ್ದಾರೆ. ಕಾವೇರಿ ವಿಚಾರದಲ್ಲಿ ಗಂಭೀರವಾಗಿ ವರ್ತಿಸಬೇಕು ಎಂದರು.
ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಾದ ಕೆ.ಆರ್.ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿಗಳಲ್ಲಿ ಪ್ರಸ್ತುತ ಇರುವ ನೀರು ನಮ್ಮ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಳಿಗೆ , ಬೆಳೆದು ನಿಂತ ರೈತರ ಬೆಳೆಗಳ ರಕ್ಷಣೆಗೆ ಮಾತ್ರ ಇದೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ನೀರನ್ನೇ ನೆಚ್ಚಿಕೊಂಡಿರುವ ನಗರಗಳು ಮತ್ತು ಗ್ರಾಮಗಳ ಕುಡಿಯುವ ನೀರಿನ ಅಭಾವವನ್ನು ನೀಗಿಸುವುದು ಕಷ್ಟ ಸಾಧ್ಯವಾಗಿರುವಾಗಮ ನೀರು ಬಿಡಲು ಹೇಗೆ ಸಾಧ್ಯ ಎಂಬುದನ್ನು ಮನವರಿಕೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ಆಗಸ್ಟ್ ತಿಂಗಳಲ್ಲೂ ಮಳೆ ಕಡಿಮೆ ಬರುವ ಸಂಭವ ವರದಿಯಾಗುತ್ತಿದೆ
ಇಂತಹ ಪರಿಸ್ಥಿತಿಯಲ್ಲಿ ಜನರ ಕುಡಿಯುವ ನೀರು ಮತ್ತು ರೈತರ ಬೆಳೆದು ನಿಂತ ಬೆಳೆಗಳ ಹಿತಾಸಕ್ತಿಯನ್ನು ಬಲಿ ಕೊಟ್ಟು ನೀರು ಹರಿಸಲು ಸಾಧ್ಯವಿಲ್ಲ. ಸಾಧ್ಯವಿಲ್ಲ ಎಂದು ಎಚ್ಚರಿಸಿದರು
ಪ್ರತಿಭಟನೆಯಲ್ಲಿ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಮಾರ್ಬಳ್ಳಿ ನೀಲಕಂಠಪ್ಪ, ವರಕೋಡು ನಾಗೇಶ್, ಲಕ್ಷಿ÷್ಮÃಪುರ ವೆಂಕಟೇಶ್, ಕೆ ಜಿ ಗುರುಸ್ವಾಮಿ, ಕುರುಬೂರು ಸಿದ್ದೇಶ್, ಪಿ.ಪರಶಿವಮೂರ್ತಿ, ಕಾಟೂರು ನಾಗೇಶ್, ಅಂಬಳೆ ಮಂಜುನಾಥ್, ವಾಜಮಂಗಲ ಮಹಾದೇವ, ಜಯರಾಮು, ಶಿವಣ್ಣ, ಮಹೇಶ್, ಮಿಲಿಟರಿ ಕುಮಾರ್, ನಂಜುAಡಸ್ವಾಮಿ, ರಂಗರಾಜು, ಪ್ರಭಾಕರ್, ಉಮೇಶ್, ಬಾಲು, ಸತೀಶ್, ಗಿರಿಯಣ್ಣ, ಸೇರಿದಂತೆ 100 ಕ್ಕೂ ಹೆಚ್ಚು ರೈತರು ಇದ್ದರು
ಕಬಿನಿ ರೈತ ಹಿತ ರಕ್ಷಣಾ ಸಮಿತಿ ಪ್ರತಿಭಟನೆ ;
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕಬಿನಿ ರೈತ ಹಿತ ರಕ್ಷಣಾ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಮಿತಿಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ
ಮೈಸೂರಿನ ಕಾಡ ಕಚೇರಿ ಮುಂದೆ ಸಮಿತಿಯ ಪದಾಧಿಕಾರಿಗಳು ಜಮಾಯಿಸಿ, ಕಾವೇರಿ ನೀರು ನಿರ್ವಹಣಾ ಮಂಡಳಿ ಗೆ ಧಿಕ್ಕಾರ. ಆದೇಶವನ್ನು ಮರುಪರಿಶೀಲನೆ ಮಾಡಲಿ. ತಮಿಳುನಾಡು ಸರ್ಕಾರಕ್ಕೆ ಧಿಕ್ಕಾರ. ಎಂಬ ಘೋಷಣೆಗಳನ್ನುಕೂಗುತ್ತಾ . ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಹಳ್ಳಿ ಕೆರೆ ಹುಂಡಿ ಭಾಗ್ಯರಾಜ್ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಪ್ರತಿದಿನ 3500 ಕ್ಯೂಸೆಕ್ಸ್ ನೀರನ್ನು ಬಿಡಬಾರದು ಕಾವೇರಿ ನೀರು ನಿರ್ವಹಣ ಮಂಡಳಿಯ ಆದೇಶವನ್ನು ಧಿಕ್ಕರಿಸಬೇಕು . 15 ದಿನಗಳವರೆಗೆ ನೀರು ಬಿಟ್ಟರೆ ನಾಲ್ಕುವರೆ ಟಿಎಂಸಿ ನೀರು ಹೆಚ್ಚಾಗುತ್ತದೆ. ರಾಜ್ಯದಲ್ಲಿ ತೀವ್ರ ಬರಗಾಲದಿಂದ ಸಾಕಷ್ಟು ಮಳೆ ಬಾರದೆ, ಜನ , ಜಾನುವಾರಗಳಿಗೆ ಕುಡಿಯಲು ನೀರು ಸಿಗುತ್ತಿಲ್ಲ, ಕೆರೆಕಟ್ಟೆಗಳಿಗೆ ನೀರಿಲ್ಲ . ಅಂತರ್ಜಲ ಸಂಪೂರ್ಣವಾಗಿ ಕುಸಿತವಾಗಿದೆ. ಕಳೆದ 60 ವರ್ಷಗಳ ಇತಿಹಾಸದ ಬರಗಾಲದ ಛಾಯೆ ಆವರಿಸಿದ್ದು, ಇದರ ಸ್ಪಷ್ಟತೆ ಮತ್ತು ಅರಿವನ್ನು ರಾಜ್ಯದಿಂದ ಪ್ರತಿನಿಧಿಸುವ ನೀರು ನಿರ್ವ ಮಂಡಳಿಯ ಸದಸ್ಯರು ಅರಿವು ಉಂಟು ಮಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ತಕ್ಷಣ ರಾಜ್ಯ ಸರ್ಕಾರವು ಬಂಗಾರಪ್ಪನವರ ಕಾಲದಲ್ಲಿ ತೆಗೆದುಕೊಂಡ ನಿರ್ಧಾರವನ್ನು ರಾಜ್ಯ ಸರ್ಕಾರವು ಮತ್ತೆ ಪಾಲಿಸಬೇಕು ಎಂದು ಒತಾಯಿಸಿದರು.
ಪ್ರತಿಭಟನೆಯಲ್ಲಿ ಕೆರೆಹುಂಡಿ ರಾಜಣ್ಣ. ಪ್ರಕಾಶ್ ಗಾಂದಿ,ü ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಒಳಗೆರೆ ಗಣೇಶ್, ಜೆಸಿಬಿ ಚಿದಂಬರ, ಮಲ್ಲಿಯೂರು ಮಹೇಂದ್ರ, ಅಂಗಡಿ ಸತೀಶ್, ಮುಕುಡ ಹಳ್ಳಿ ರಾಜು, ಮುದ್ದಾಹಳ್ಳಿ ಮಧುಸೂಧನ್, ಹಂಚ್ಯಾದೇವರಾಜ್, ನಂದಿಗುAದಸಿದಪ್ಪ, ನರಸಮಂಗಲ ನಾಗು, ಮಾದಾಪುರ ಕೆಂಪರಾಜ್ ಮೋಹನ್ ರಾಜೇಶ್ ದೇವಿರಮ್ಮನಹಳ್ಳಿ ಹುಂಡಿ ರೇವಣ್ಣ ಹೊನ್ನೇಗೌಡನಹಳ್ಳಿ ಮಹೇಶ್. ಕೀಲಿಪುರ ಶ್ರೀಕಂಠ ಊರ್ದಳ್ಳಿ ರಾಮಣ್ಣ ಸ್ಭೆರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.
ಕರ್ನಾಟಕ ಸೇನಾಪಡೆಯಿಂದ ಪ್ರತಿಭಟನೆ ;
ತಮಿಳುನಾಡಿಗೆ ಮುಂದಿನ 15 ದಿನ ನಿತ್ಯ 3,500 ಕ್ಯೂಸೆಕ್ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಮಂಡಳಿಯ ಆದೇಶವನ್ನು ಖಂಡಿಸಿ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ವತಿಯಿಂದ ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಕಪುö್ಪ ಪಟ್ಟಿ ಧರಿಸಿ, ಪ್ರತಿಭಟನೆಯನ್ನು ನಡೆಸಲಾಯಿತು.
ಕೇಂದ್ರ ಸರ್ಕಾರ ಈ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನೇ ರದ್ದು ಮಾಡಬೇಕು. ಹಾಗೂ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಒಂದು ಹನಿ ನೀರೂ ಬಿಡಬಾರದು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿ, ಪ್ರಭುಶಂಕರ್, ಗೋಲ್ಡನ್ ಸುರೇಶ್, ಸಿದ್ದೇಗೌಡ, ಗಿರೀಶ್ , ಸೋಮೇಗೌಡ, ಸಿಂದುವಳ್ಳಿ ಶಿವಕುಮಾರ್, ರಾಧಾಕೃಷ್ಣ, ಮಂಜುಳಾ, ತಾಯೂರು ಗಣೇಶ್, ಡಾ . ನಾಗೇಂದ್ರ, ಚಂದ್ರಶೇಖರ್, ಸುನೀಲ್, ರಮೇಶ್, ಶಿವಲಿಂಗಯ್ಯ, ಹನುಮಂತಯ್ಯ , ನಾರಾಯಣ ಗೌಡ, ಶಿವರಾಂ, ಮಲ್ಲೇಶ್, ಹೊನ್ನೇಗೌಡ, ವಿಜಯೇಂದ್ರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ರೈತ ಸಂಘದಿAದ ಪ್ರತಿಭಟನೆ ;
ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ಬಿಡಬಾರದು ಎಂದು ಆಗ್ರಹಿಸಿ ರೈತ ಸಂಘದಿAದ ನಗರದ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಗಾಂಧಿ ಪ್ರತಿಮೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಮರಂಕಯ್ಯ ಸೇರಿದಂತೆ ಹಲವಾರು ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.