Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವುದಕ್ಕೆ ಆಗಸ್ಟ್ 31 ರವರೆಗೂ ಅವಕಾಶ

ಮೈಸೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚಾವಿಸನಿನಿ) ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ಮಾಹಿತಿ ಸಂಗ್ರಹ ಕಾರ್ಯ ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಯುತ್ತಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ, ಫಲಾನುಭವಿಗಳ ಮಾಹಿತಿ ಸಂಗ್ರಹಣೆಗೆ ಜು. 31,2026 ಕೊನೆಯ ದಿನ ಎಂಬ ಬಗ್ಗೆ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ವದಂತಿ ಗ್ರಾಹಕರು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡಿದೆ. ಈ ಕುರಿತು ಚಾವಿಸನಿನಿ ಸ್ಪಷ್ಟನೆ ನೀಡಿದ್ದು, ಮಾಹಿತಿ ಸಂಗ್ರಹಣೆ ಹಾಗೂ ಅಗತ್ಯ ವಿವರಗಳನ್ನು ಸಲ್ಲಿಸಲು ಆಗಸ್ಟ್ 31 ರವರೆಗೂ ಅವಕಾಶವಿದೆ.
ಆದ್ದರಿಂದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳು ಹಾಗೂ ವಿದ್ಯುತ್ ಗ್ರಾಹಕರು ಯಾವುದೇ ಆತಂಕ ಅಥವಾ ಗೊಂದಲಕ್ಕೆ ಒಳಗಾಗದೆ, ನಿಗದಿತ ಅವಧಿಯೊಳಗೆ ತಮ್ಮ ಮಾಹಿತಿಯನ್ನು ಸಲ್ಲಿಸಬಹುದು ಮತ್ತು ಇದಕ್ಕಾಗಿ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ ಎಂದು ಚಾವಿಸನಿನಿ ತಿಳಿಸಿದೆ.
ಚಾವಿಸನಿನಿಯ ಮೀಟರ್ ರೀಡರ್ ಅಥವಾ ನಿಯೋಜಿತ ಸಿಬ್ಬಂದಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗೆ ಮಾಹಿತಿ ಸಂಗ್ರಹಣೆಗೆ ಭೇಟಿ ನೀಡಲಿದ್ದು, ಗ್ರಾಹಕರು ಈ ಕೆಳಗಿನ ಅಗತ್ಯ ದಾಖಲೆಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮೀಪದ ಚಾವಿಸನಿನಿ ಕಚೇರಿಯನ್ನು ಸಂಪರ್ಕಿಸುವAತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.