ತಾರಕ, ಹೆಬ್ಬಳ್ಳ ಜಲಾಶಯಗಳ ನೀರನ್ನು ಕುಡಿಯುವ ನೀರಿಗೆ ಮಾತ್ರ ಬಳಕೆ
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ತಾರಕ, ಹೆಬ್ಬಳ್ಳ ಜಲಾಶಯದ ಜಲಾನಯನ ಪ್ರದೇಶದಲ್ಲಿ ವಾಡಿಕೆಯಂತೆ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಕಾರಣ, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿದೆ. ಹಾಗಾಗಿ ತಾರಕ ಮತ್ತು ಹೆಬ್ಬಳ್ಳ ಜಲಾಶಯದಲ್ಲಿರುವ ನೀರನ್ನು ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿದೆ ಎಂದು ಕಬಿನಿ ಜಲಾಶಯ ವಿಭಾಗದ ತಾರಕ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಹಾಗೂ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ತಾರಕ ಮತ್ತು ಹೆಬ್ಬಳ್ಳ ಜಲಾಶಯದಲ್ಲಿ ಪ್ರಸ್ತುತ ಕುಡಿಯುವ ನೀರಿಗಾಗಿ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಕ್ರಮವಾಗಿ 1.275 ಟಿ.ಎಂ.ಸಿ ಮತ್ತು 0.054 ಟಿ.ಎಂ.ಸಿ ಪರಿಮಾಣದ ನೀರು ಮಾತ್ರ ಬಳಕೆಗೆ ಲಭ್ಯವಿರುತ್ತದೆ.
ಜಲಾಶಯಗಳಲ್ಲಿ ಶೇಖರಣೆಯಾಗಿರುವ ನೀರನ್ನು ಕುಡಿಯುವ ನೀರಿಗೆ ತೊಂದರೆ ಉಂಟಾದ ಸಂದರ್ಭದಲ್ಲಿ ಬಳಸಿಕೊಳ್ಳಲು ನಿರ್ಧಾರ ತೆಗೆದುಕೊಳ್ಳುವ ನಿಟ್ಟಿನಲ್ಲಿ ಅನಗತ್ಯ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ದಿನಾಂಕ 05-03-2014 ಮತ್ತು 27-03-2014ರ ಸರ್ಕಾರದ ಆದೇಶಗಳಲ್ಲಿ ಜಲಸಂಪನ್ಮೂಲ ಇಲಾಖೆಯಡಿ ಜಲಾಶಯಗಳಲ್ಲಿ ಸಂಗ್ರಹಿಸಿರುವ ನೀರನ್ನು ಬೇಸಿಗೆಯಲ್ಲಿ ಅಥವಾ ನೀರಿನ ಅಭಾವವಿರುವ ಪರಿಸ್ಥಿತಿಯಲ್ಲಿ ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ನಿರ್ಧರಿಸಲು ಆಯಾ ಪ್ರಾದೇಶಿಕ ಆಯುಕ್ತರುಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿರುತ್ತದೆ.
ಸದರಿ ಆದೇಶದನ್ವಯ ಪ್ರಸಕ್ತ ಸಾಲಿನಲ್ಲಿ ಕ್ರಮವಹಿಸುವಂತೆ ದಿನಾಂಕ 26-02-2026 ಮತ್ತು ದಿನಾಂಕ 05-06-2026ರ ಸರ್ಕಾರದ ಪತ್ರಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಜಲ ನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿರುವ ಕಾರಣ ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದAತೆ ಕಾಯ್ದಿರಿಸಿಕೊಂಡು ಬಳಸಲು ಈಗಾಗಲೇ ಸೂಚನೆ ನೀಡಲಾಗಿರುತ್ತದೆ ಎಂದು ಹೇಳಿದ್ದಾರೆ.
ರಾಜ್ಯಾದ್ಯಾಂತ ಬಹುತೇಕ ಜಲಾಶಯಗಳ ಒಳಹರಿಸುವ ಶೂನ್ಯಕ್ಕೆ ಇಳಿದಿದ್ದು ಹಾಗೂ ‘ಎಲ್ ನಿನೊ’ ಪರಿಣಾಮದಿಂದ ಉಂಟಾಗಲಿರುವ ಬರದ ಪರಿಸ್ಥಿತಿ ಹಾಗೂ ಪರಿಣಾಮಗಳ ಬಗ್ಗೆ ದಿನಾಂಕ 02-07-2026 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆಯ ನಂತರ “ಜಲಾಶಯ ನಂಬಿಕೊAಡು ಯಾವ ರೈತರು ಬೆಳೆ ಹಾಕಬೇಡಿ” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಹಾಲಿ ಪರಿಸ್ಥಿತಿಯನ್ನು ಅವಲೋಕಿಸಲಾಗಿ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಯಾವುದೇ ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ. ಈ ಸಾಲಿನಲ್ಲಿ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಸದ್ಬಳಕೆ ಮಾಡಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ತಾರಕ/ಹೆಬ್ಬಳ್ಳ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟುದಾರರು/ರೈತರುಗಳು ಜಲಾಶಯದ ನೀರನ್ನು ಅವಲಂಭಿತರಾಗಿ ಯಾವುದೇ ಬೆಳೆಗಳನ್ನು ಬೆಳೆಯದಂತೆ ಅಚ್ಚುಕಟ್ಟುದಾರರಲ್ಲಿ ಈ ಮೂಲಕ ಮನವಿ ಮಾಡಲಾಗಿದೆ.
ತಾರಕ ಮತ್ತು ಹೆಬ್ಬಳ್ಳ ಜಲಾಶಯದಲ್ಲಿರುವ ನೀರನ್ನು ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿದೆ ಎಂದು ಕಬಿನಿ ಜಲಾಶಯ ವಿಭಾಗದ ತಾರಕ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಹಾಗೂ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--°C
Mysore, IN
Loading...