Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಜ ಲಕ್ಷ್ಮಿ ಅಲಂಕಾರದಲ್ಲಿ ವಿಶೇಷವಾಗಿ ಕಂಗೊಳಿಸುತ್ತಿದ್ದ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯನ್ನು ಕಣ್ಮನ ತುಂಬಿಕೊ0ಡ ಭಕ್ತ ಸಾಗರ


ಮೈಸೂರು: ಆಷಾಢ ಮಾಸ ಮೂರನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ ಗಜ ಲಕ್ಷ್ಮಿ ಅಲಂಕಾರದಲ್ಲಿ ವಿಶೇಷವಾಗಿ ಕಂಗೊಳಿಸುತ್ತಿದ್ದ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. .
ಮಳೆಯಂತೆ ಸುರಿಯುತ್ತಿದ್ದ ಮೈಕೊರೆಯುವ ಚುಮು, ಚುಮು ಚಳಿ, ಬೀಸುತ್ತಿದ್ದಾ ಥಂಡಿ ಗಾಳಿ, ಮುಸುಕಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆಯಿAದಲೇ ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟದತ್ತ ಧಾವಿಸಿ ಬಂದ ಭಕ್ತರು ಸರತಿ ಸಾಲಿನಲ್ಲಿ ನಿಂತು ನಾಡ ಅಧಿದೇವತೆಯಾದ ಬೆಟ್ಟದ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಧನ್ಯರಾದರು. ನೂರಾರು ಮಂದಿ ಭಕ್ತರು ಬೆಟ್ಟದ ತಪ್ಪಲಿನಿಂದ ಒಂದು ಸಾವಿರ ಮೆಟ್ಟಿಲುಗಳನ್ನು ಹತ್ತಿಕೊಂಡು ದೇವಸ್ಥಾನಕ್ಕೆ ಬಂದರೆ ಇನ್ನು ಕೆಲವರು ಸಾರಿಗೆ ಬಸ್‌ನಲ್ಲಿ ಬೆಟ್ಟಕ್ಕೆ ಆಗಮಿಸಿದರು. ಉಚಿತ ಪ್ರವೇಶ, 2000 ರೂ ಟಿಕೆಟ್ ಸರತಿ ಸಾಲಿನಲ್ಲಿ ನಿಂತು ಸಾವದಾನವಾಗಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ಸರತಿ ಸಾಲಿನುದ್ದಕ್ಕೂ ಚಾಮುಂಡೇಶ್ವರಿಯ ಜಯಘೋಷಗಳು ಮೊಳಗಿದವು.
ಚಾಮುಂಡಿಬೆಟ್ಟಕ್ಕೆ ಉಚಿತ ಬಸ್‌ಗಳಲ್ಲಿ ಮಾತ್ರವಲ್ಲ, ಮೆಟ್ಟಿಲು ಮಾರ್ಗವಾಗಿ ಬರುವ ಭಕ್ತರ ಸಂಖ್ಯೆಯೂ ಅಧಿಕವಾಗಿತ್ತು. ಯುವತಿಯರು, ಗೃಹಿಣಿಯರು 1001 ಮೆಟ್ಟಿಲುಗಳಿಗೂ ಕುಂಕುಮ, ಅರಿಶಿಣ ಹಚ್ಚುತ್ತ ಮೆಟ್ಟಿಲು ಹತ್ತಿದರು. ಕೆಲವರು ಮಂಡಿಯಲ್ಲೇ ಮೆಟ್ಟಿಲುಗಳನ್ನು ಹತ್ತುವ ದೃಶ್ಯ ಭಕ್ತಿಭಾವದ ರೂಪಕದಂತಿತ್ತು.
ವಿಶೇಷ ಪೂಜೆ: ಮುಂಜಾನೆ ಮೂರು ಗಂಟೆಯಿAದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು. ಮೊದಲು ಚಾಮುಂಡೇಶ್ವರಿ ವಿಗ್ರಹವನ್ನು ಶುದ್ಧಗೊಳಿಸಿ, ಬಳಿಕ ವಿಶೇಷವಾಗಿ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಮುಂಜಾನೆ 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ಅಭಿಷೇಕ ನೆರವೇರಿಸಲಾಯಿತು. ಬಳಿಕ ಬೆಳಗ್ಗೆಯಿಂದ ರಾತ್ರಿ 10 ಗಂಟೆವರೆಗೂ ಬೆಟ್ಟದ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದರ್ಶನದ ವೇಳೆ ಯಾವುದೇ ನೂಕು ನುಗ್ಗಲಿಗೆ ಅವಕಾಶವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.
ವಿಶೇಷ ಗಜಲಕ್ಷಿ÷್ಮÃ ಅಲಂಕಾರ: ಎಂದಿನAತೆ ಮೂರನೇ ಆಷಾಢ ಶುಕ್ರವಾರವೂ ದೇವಾಲಯದ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ತಾಯಿ ಚಾಮುಂಡೇಶ್ವರಿ, ನೇರಳೆ ಬಣ್ಣದ ಸೀರೆಯುಟ್ಟು ವಿಶೇಷ ಗಜಲಕ್ಷಿ÷್ಮÃ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಳು. ದೇವಾಲಯದ ಇಡೀ ಆವರಣ ವಿಶೇಷ ಹೂವಿನ ಅಲಂಕಾರದಿAದ ಆಕರ್ಷಕವಾಗಿತ್ತು. ಪ್ರವೇಶ ದ್ವಾರದಿಂದ ದೇವಸ್ಥಾನದ ಗರ್ಭಗುಡಿವರೆಗೆ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಆರ್ಕಿಡ್ ಹೂ, ಗುಲಾಬಿ, ಸೇವಂತಿಗೆ, ಚೆಂಡು ಹೂ ಸೇರಿದಂತೆ ನಾನಾ ಬಗೆಯ ಹೂಗಳಿಂದ ದೇವಸ್ಥಾನದ ಆವರಣ ಕಂಗೊಳಿಸುತ್ತಿತ್ತು. ಸಾರ್ವಜನಿಕರು ತಮ್ಮ ಮೊಬೈಲ್‌ಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು.
ಎಂದಿನAತೆ ಬೆಟ್ಟಕ್ಕೆ ಆಗಮಿಸಿದ ಭಕ್ತರಿಗೆ ಮಲ್ಟಿಲೆವೆಲ್ ಪಾರ್ಕಿಂಗ್ ಜಾಗದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಗಣ್ಯರಿಂದ ದರ್ಶನ: ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಹಲವು ಗಣ್ಯರು ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಂಎಲ್‌ಸಿ ಸಿ.ಟಿ.ರವಿ, ಶಾಸಕರಾದ ಕೆ.ಹರೀಶ್‌ಗೌಡ, ರಘುನಾಥ್, ಚಿತ್ರ ನಟ ಶಶಿಕುಮಾರ್ ಸೇರಿದಂತೆ ಹಲವರು ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಯಾವುದೇ ಅಹಿತಕರ ಘಟನೆಗಳು ಸಂಭವಿಸದAತೆ ಬೆಟ್ಟದಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.
ನಗರದ ಹಲವೆಡೆ ಪ್ರಸಾದ ವಿತರಣೆ: 3ನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅಲ್ಲದೆ ಹಲವೆಡೆ ಸಾರ್ವಜನಿಕರಿಗೆ ಪ್ರಸಾದ ವಿತರಿಸಲಾಯಿತು. ಅಗ್ರಹಾರ, ಚಾಮುಂಡಿಪುರA, ಕುವೆಂಪುನಗರ, ಒಂಟಿಕೊಪ್ಪಲು, ಆರ್‌ಟಿಒ ವೃತ್ತ ಸೇರಿದಂತೆ ಹಲವೆಡೆ ಪ್ರಸಾದ ವಿತರಿಸಲಾಯಿತು.