Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬರನಿರ್ವಹಣೆ: ರಾಗಿ ಸೇರಿದಂತೆ ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಸಲಹೆ

ಮೈಸೂರು: ದೇಶದ ಹಲವು ರಾಜ್ಯಗಳಲ್ಲಿ ಆವರಿಸಿರುವ ಬರದ ಛಾಯೆ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನು ಕಾಡಿದೆ. ಬಹುತೇಕ ಕೃಷಿಯನ್ನೇ ಅವಲಂಬಿಸಿರುವ ಪರಂಪರೆಯ ನೆಲ ಮೈಸೂರು ಕೂಡ ವರುಣನ ಕೃಪೆಗೆ ತುತ್ತಾಗಿದ್ದು, ಜಿಲ್ಲೆಯಲ್ಲಿ ಶೇಕಡ 50 ರಷ್ಟು ಅಧಿಕ ಪ್ರಮಾಣದ ಬಿತ್ತನೆ ಕುಂಠಿತವಾಗಿದೆ. ಹೀಗಾಗಿ ಕಡಿಮೆ ನೀರು ಆಶ್ರಯಿಸುವ ಪರ್ಯಾಯ ಬೆಳೆ ಬಗ್ಗೆ ಗಮನ ಹರಿಸುವಂತೆ ರೈತರಿಗೆ ಕೃಷಿ ಇಲಾಖೆ ಸೂಚಿಸಿದೆ.ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗಳು ರೈತರಲ್ಲಿ ಬರ ನಿರ್ವಹಣೆಯ ಬಗ್ಗೆ ನಿರಂತರವಾಗಿ ಅರಿವು ಮೂಡಿಸುತ್ತ ಬಂದಿದ್ದು ಬೆಳೆ ವಿಮೆ…

Read More

ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳನ್ನು ಆಹ್ವಾನಿಸದರೆ ಸಂತಸವಾಗುತ್ತೆ; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಈ ಬಾರಿ ನಡೆಯಲಿರುವ ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸಿದರೆ, ನನಗೆ ಬಹಳ ಖುಷಿಯಾಗುತ್ತದೆ’ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನಮ್ಮ ವರುಣ ಕ್ಷೇತ್ರದಲ್ಲಿರುವ ಮಠದವರು. ಅವರು ಎಲ್ಲ ಕ್ಷೇತ್ರದಲ್ಲೂ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’. ಶ್ರೀಗಳನ್ನು ಆಹ್ವಾನಿಸಬೇಕು ಎಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಉನ್ನತಮಟ್ಟದ…

Read More

ಜೆಡಿಎಸ್ ನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಶ್ರಮಿಸಬೇಕು ; ಮಾಜಿ ಶಾಸಕ ಕೆ .ಮಹದೇವ್

ಪಿರಿಯಾಪಟ್ಟಣ : ಪಕ್ಷ ಸಂಘಟನೆಯ ಮೂಲಕ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಮಾಜಿ ಶಾಸಕ ಕೆ ಮಹದೇವ್ ತಿಳಿಸಿದರು.  ಪಟ್ಟಣದ ಶ್ರೀ ಮಂಜುನಾಥ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಬೂತ್ ಕಮಿಟಿ ಸಭೆ ಯನ್ನು ಉದ್ಘಾಟಿಸಿ ಮಾತನಾಡಿದರು.  ಕಾಂಗ್ರೆಸ್ ಪಕ್ಷವು ಜೆಡಿಎಸ್ ಮತ್ತು ಬಿಜೆಪಿ ಯವರು ಮತ ಕಳ್ಳತನ  ಮಾಡುತ್ತಿದ್ದಾರೆ ಎಂದು ಆರೋಪಿಸುವುದರ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸಚಿವ ಎಚ್ ಡಿ…

Read More

ನಿಯಮ ಪಾಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಚಾಮುಂಡೇಶ್ವರಿಯ ದರ್ಶನವೇ ಸಿಗಲಿಲ್ಲ !

ಮೈಸೂರು; ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಇದಕ್ಕೆ ಕಾರಣ ವಿವಿಐಪಿ, ವಿಐಪಿಗಳಿಗೆ ದರ್ಶನಕ್ಕಾಗಿ ನಿಗದಿಪಡಿಸಿದ್ದ ಸಮಯದ ಅವಧಿ ಮೀರಿದ್ದು. ಮುಂಜಾನೆ 5 ರಿಂದ ಬೆಳಗ್ಗೆ 9ರ ತನಕ ಮಾತ್ರ ಗಣ್ಯರು, ಅತಿ ಗಣ್ಯರಿಗೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕಾಗಿ ಸಮಯವನ್ನು ನಿಗದಿಪಡಿಸಲಾಗಿತ್ತು. ಆದರೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರು ಬೆಳಗ್ಗೆ 10.30ಕ್ಕೆ ಬೆಟ್ಟಕ್ಕೆ ಬಂದರು. ಆಗಾಗಲೇ U್ಪಣ್ಯರ ದರ್ಶನದ ಸಮಯ ಮೀರಿ…

Read More

ಚಾಮುಂಡೇಶ್ವರಿಗೆ ಹಸಿರು ರೇಷ್ಮೆ ಸೀರೆ ನೀಡುವ ಮೂಲಕ ಹರಿಕೆ ತೀರಿಸಿದ ಸಿಎಂ ಪತ್ನಿ*ಪತಿ ಮುಖ್ಯಮಂತ್ರಿಯಾಗಲು ಎಂದು ಚಾಮುಂಡೇಶ್ವರಿಕೆ ಹರಿಕೆ ಹೊತ್ತಿದ್ದ ಡಿ.ಕೆ. ಶಿವಕುಮಾರ್ ಪತ್ನಿ ಉಷಾ

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರ ಮೈಸೂರಿನಲ್ಲಿ ನೆಲೆ ನಿಂತಿರುವ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ದುಬಾರಿ ಬೆಲೆಯ ಹಸಿರು ರೇಷ್ಮೆ ಸೀರೆಯನ್ನು ನೀಡಿ, ಹರಿಕೆ ತೀರಿಸಿದರು.ಗಣ್ಯರ ಸಾಲಿನಲ್ಲಿ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಂಡತಿ ಉಷಾ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಹೊತ್ತಿದ್ದು ಅದರಂತೆ ಹಸಿರು ಬಣ್ಣದ ರೇಷ್ಮೆ ಸೀರೆಯನ್ನು ನೀಡಿ ಹರಕೆ ತೀರಿಸಿದರು.ಈ ಹಿಂದೆ ಡಿ.ಕೆ….

Read More

ಭಯ ಹೋಗಲಾಡಿಸಲು ಅಣುಕು ಪರೀಕ್ಷೆಗಳು ಸಹಕಾರ: ಎಸ್.ಎಲ್. ಚೆನ್ನಬಸವಣ್ಣ

ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಉದ್ಯೋಗಾಕಾಂಕ್ಷಿಗಳ ಮನಸ್ಸಿನಲ್ಲಿರುವ ಭಯ ಮತ್ತು ಆತಂಕವನ್ನು ಹೋಗಲಾಡಿಸಲು ಅಣುಕು ಪರೀಕ್ಷೆಗಳು ಹೆಚ್ಚು ಸಹಕಾರಿಯಾಗಲಿವೆ ಎಂದು ಕರ್ನಾಟಕ ಪೊಲೀಸ್ ಅಕಾಡೆಮಿ ಉಪನಿರ್ದೇಶಕ ಎಸ್.ಎಲ್. ಚೆನ್ನಬಸವಣ್ಣ ಹೇಳಿದರು.ಶುಕ್ರವಾರ ಮೈಸೂರಿನ ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಅಣುಕು ಪರೀಕ್ಷೆಗೆ ಚಾಲನೆ ನೀಡಿ, ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮೈಸೂರಿನ ನಗರ ಕೇಂದ್ರ ಗ್ರಂಥಾಲಯವು ಹಮ್ಮಿಕೊಂಡಿರುವ ಈ ಅಣುಕು ಪರೀಕ್ಷೆಗಳ ಸರಣಿ ಅತ್ಯಂತ ವಿಶೇಷವಾದುದಾಗಿದೆ. ಇದು ಬಡ ಹಾಗೂ ಗ್ರಾಮೀಣ ಭಾಗದ…

Read More

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ; ವರ್ಷ ಪೂರ್ತಿ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲು ಯೋಜನೆ; ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಶುಕ್ರವಾರ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಭಾಂಗಣದಲ್ಲಿ 2026ರ ದಸರಾ ವಸ್ತು ಪ್ರದರ್ಶನ ಆಯೋಜನೆಯ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ವಸ್ತು ಪ್ರದರ್ಶನವು ದಸರಾ ಹಬ್ಬದಿಂದ…

Read More

ಕಬ್ಬಿನ ಬಾಕಿ ಹಣ ಪಾವತಿಸುವಂತೆ ಜು.27ರಂದು ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಬೆಳೆಗಾರರ ರೈತರ ಮುತ್ತಿಗೆ; ಕುರುಬೂರು ಶಾಂತಕುಮಾರ್

ಮೈಸೂರು ; ರಾಜ್ಯ ಸರ್ಕಾರ ನಿಗದಿ ಮಾಡಿದ ಕಬ್ಬಿನ ಹಣದ ಬಾಬ್ತು ಪ್ರತಿ ಟನ್ ಗೆ 50 ರೂಪಾಯಿ ಬಾಕಿ ಹಣವನ್ನು ಬಣ್ಣಾರಿ ಕಾರ್ಖಾನೆ ಮೊದಲು ರೈತರಿಗೆ ಪಾವತಿಸಿ, ನಂತರ ಕಾರ್ಖಾನೆ ಆರಂಭಿಸಲಿ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಆಗ್ರಹಿಸಿದರು.ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2022-23 ಸಾಲಿನಲ್ಲಿ ರಾಜ್ಯ ಸರ್ಕಾರ ಕಬ್ಬಿಗೆ ಹೆಚ್ಚುವರಿ ಟನ್‌ಗೆ 150 ರೂಪಾಯಿ ನಿಗದಿ ಮಾಡಿ ಆದೇಶ ಹೊರಡಿಸಿದಾಗ, ನ್ಯಾಯಾಲಯದಲ್ಲಿತಡೆಯಾಜ್ಞೆ ತಂದು ರೈತರನ್ನು…

Read More

ಈ ಬಾರಿಯೂ ದಸರಾವನ್ನು ವಿಜೃಂಭಣೆಯಿ0ದಲೇ ಆಚರಿಸಲು ತೀರ್ಮಾನಿಸಲಾಗಿದೆ; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು; ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಿಸಬೇಕೆಂಬ ಅಭಿಪ್ರಾಯಗಳು ಕೇಳಿಬಂದಿದ್ದವು. ಆದರೆ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆಯ ಬಳಿಕ, ಪ್ರತಿವರ್ಷದಂತೆ ಈ ಬಾರಿಯೂ ದಸರಾವನ್ನು ಸಡಗರ ಮತ್ತು ವಿಜೃಂಭಣೆಯಿAದಲೇ ಆಚರಿಸಲು ತೀರ್ಮಾನಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತಿಂದ್ರ ಸಿದ್ದರಾಮಯ್ಯ ಹೇಳಿದರು.ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ಸಾಂಸ್ಕöÈತಿಕ ಕ್ರೀಡೆಯಾದ ಕಂಬಳವನ್ನು ಕೇವಲ…

Read More

ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭಿಸಲು ಡಾ.ಕೆ.ಬಿ.ಲಿಂಗರಾಜು ಆಗ್ರಹ

ಮೈಸೂರು: ತಾಲ್ಲೂಕಿನ ಗುಡುಮಾದನಹಳ್ಳಿ ಬಳಿ ಉದ್ದೇಶಿತ ನಿಮ್ಹಾನ್ಸ್ ಆಸ್ಪತ್ರೆ ಘಟಕದ ಕಾಮಗಾರಿ ಆರಂಭಿಸಬೇಕು ಎಂದು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಡಾ.ಕೆ.ಬಿ.ಲಿಂಗರಾಜು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಜಿಲ್ಲಾಡಳಿತವು ಈಗಾಗಲೇ ಸುಮಾರು 20 ಎಕರೆ ಭೂಮಿಯನ್ನು ಹಸ್ತಾಂತರಿಸಿದ್ದು, ಈ `ವೇಳೆಗೆ ಕಟ್ಟಡ ಕಾಮಗಾರಿ ಆರಂಭವಾಗಬೇಕಾಗಿತ್ತು. ಆದರೆ, ಗುತ್ತಿಗೆದಾರರು ಇನ್ನೂ ಕಾಮಗಾರಿ ಪ್ರಾರಂಭಿಸದಿರುವುದು ಸಾರ್ವಜನಿಕರಲ್ಲಿ ನಿರಾಸೆ ಮೂಡಿಸಿದೆ ಎಂದು ಹೇಳಿದ್ದಾರೆ.ನಿಮ್ಹಾನ್ಸ್ ಆಸ್ಪತ್ರೆ ಸ್ಥಾಪನೆಯಾದರೆ ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ…

Read More