ಸೇವಾವಧಿಯಲ್ಲಿ ಮಾಡಿದ ಸಾರ್ಥಕ ಸೇವೆಯು ಎಂದಿಗೂ ಶಾಶ್ವತವಾಗಿರುತ್ತದೆ : ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್ ಬಿ. ಕೆ
ಪಿರಿಯಾಪಟ್ಟಣ : ಸೇವಾವಧಿಯಲ್ಲಿ ಮಾಡಿದ ಸಾರ್ಥಕ ಸೇವೆಯು ಎಂದಿಗೂ ಶಾಶ್ವತವಾಗಿರುತ್ತದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ್.ಬಿ.ಕೆ. ಅಭಿಪ್ರಾಯ ವ್ಯಕ್ತಪಡಿಸಿದರು. ಪಿರಿಯಾಪಟ್ಟಣ ತಾಲ್ಲೂಕು ಆರೋಗ್ಯ ಇಲಾಖೆಯ ತಾಲ್ಲೂಕು ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆಗೊಂಡ ಇವರನ್ನು ಇಲಾಖೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶ್ರೀನಿವಾಸ್ ರವರು ನಾನು ತಾಲ್ಲೂಕು ಆರೋಗ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಲು ಸ್ಥಳೀಯ ಶಾಸಕರಾದ ಕೆ.ವೆಂಕಟೇಶ್ ರವರು ಸಹಕಾರ ನೀಡಿದರು ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಇಲಾಖೆ…