ಕಾಯಕ ಸಮಾಜಗಳನ್ನ ರಾಜ್ಯ ಸರ್ಕಾರ ನಿರ್ಲಕ್ಷ ಮಾಡಿದೆ; ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ಮೈಸೂರು; ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದವರು ಸಣ್ಣ ಸಣ್ಣ ನಿರ್ಲಕ್ಷ÷್ಯ ಮಾಡಿದ್ದಾರೆ ತಾತ್ಸಾರ ಮಾಡಿದ್ದಾರೆ ಕಾಯಕ ಸಮಾಜಗಳನ್ನ ಸರ್ಕಾರ ನಿರ್ಲಕ್ಷ ಮಾಡಿದೆ ಅವರ ಅಭಿವೃದ್ಧಿಗೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶನಿವಾರ ನಗರದ ಜೆ.ಕೆ.ಮೈದಾನದಲ್ಲಿ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ವಿಧಾನ ಪರಿಷತ್ ಸದಸ್ಯ ಆರ್.ರಘುಗೆ ಅಭಿನಂದನೆ ಹಾಗೂ ಬಿಜೆಪಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾಯಕ ಸಮಾಜದ ಯೋಜನೆಗಳನ್ನು…