ಸಾಮಾಜಿಕ, ಆರ್ಥಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯಕ ; ಪ್ರೊ. ಎಂ. ಆರ್. ಗಂಗಾಧರ್
ಮೈಸೂರು; ಸಾಮಾಜಿಕ, ಆರ್ಥಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯಕ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಎಂ. ಆರ್. ಗಂಗಾಧರ್ ಹೇಳಿದರು. ಸೋಮವಾರ ಮೈಸೂರಿನ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ 2026-27ರ ದೀಕ್ಷಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯಕ ಎಂದು ತಿಳಿಸಿದರು. ದೀಕ್ಷಾರಂಭವು ಜ್ಞಾನದ ಆರಂಭ, ಜೊತೆಗೆ ಕಾಲೇಜನ್ನು ಪರಿಚಯಿಸುವುದು, ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುವುದು ಹಾಗೂ ಜ್ಞಾನದ ಜೊತೆಗೆ ಕೌಶಲ್ಯ ಅಭಿವೃದ್ಧಿ ಮತ್ತು…