ದೇಶದ ರಕ್ಷಣೆಯಲ್ಲಿ ಸೈನಿಕರ ಪಾತ್ರ ಅಪಾರವಾದದ್ದು : ರೋಟರಿ ಕ್ಲಬ್ ಅಧ್ಯಕ್ಷ ಬಲರಾಮ್
ಪಿರಿಯಾಪಟ್ಟಣ : ದೇಶದ ರಕ್ಷಣೆಯಲ್ಲಿ ಸೈನಿಕರ ಪಾತ್ರ ಅಪಾರವಾದದ್ದು ಎಂದು ಪಿರಿಯಾಪಟ್ಟಣ ರೋಟರಿ ಕ್ಲಬ್ ಅಧ್ಯಕ್ಷ ಬಲರಾಮ್ ತಿಳಿಸಿದರು. ಪಿರಿಯಾಪಟ್ಟಣ ರೋಟರಿ ಕ್ಲಬ್ ವತಿಯಿಂದ ತಾಲೂಕಿನ ಕುಂದನಹಳ್ಳಿ ಕೂರ್ಗ್ ವಾಟರ್ ಪಾರ್ಕ್ ನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ದೇಶದ ಸೈನಿಕರು ಪಾಕಿಸ್ತಾನದ ವಿರುದ್ಧ ಶೌರ್ಯವನ್ನು ಮೆರೆದ ಈ ದಿನ ಮುಂದಿನ ಪೀಳಿಗೆಗೆ ಪ್ರೇರಣೆಯ ದಿನವಾಗಿದೆ ನಮ್ಮ ದೇಶದ ಸೈನಿಕರು ಮಳೆ, ಗಾಳಿ, ಬಿಸಿಲು, ಚಳಿ ಎನ್ನದೆ ಹಗಲಿರುಳು ದೇಶಕ್ಕಾಗಿ ದುಡಿಯುತ್ತಿದ್ದಾರೆ…