ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ರದ್ದು ಮಾಡಲು ಆಗ್ರಹಿಸಿ ಕಾಂಗ್ರೆಸ್‌ನಿ0ದ ಪ್ರತಿಭಟನೆ
ಮೈಸೂರು; ನೀಟ್ ಪರೀಕ್ಷೆಯ ಅಕ್ರಮದಿಂದ ಆತ್ಮಹತ್ಯೆ ಮಾಡಿಕೊಂಡು ೨೧ ವಿದ್ಯಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರಕಾರ ಪರಿಹಾರ ನೀಡಬೇಕು, ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ(ಎನ್‌ಟಿಎ) ರದ್ದು ಮಾಡಬೇಕು ಎಂದು ಒತ್ತಾಯಿಸಿ, ನಗರ ಹಾಗೂ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಅಕ್ರಮ ಖಂಡಿಸಿ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಸರಿಯಲ್ಲ. ಅಕ್ರಮದಿಂದ ವಿದ್ಯಾರ್ಥಿ…