ಪ್ರಸ್ತುತ ಭಾರತದ ಯುವಶಕ್ತಿಯಿಂದಾಗಿಯೇ ಭಾರತದ ಅರ್ಥವ್ಯವಸ್ಥೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ; ಪ್ರಧಾನ ಮಂತ್ರಿ ನರೇಂದ್ರ ಮೋದಿ
ಮೈಸೂರು; ಪ್ರಸ್ತುತ ಭಾರತದ ಯುವಶಕ್ತಿಯಿಂದಾಗಿಯೇ ಭಾರತದ ಅರ್ಥವ್ಯವಸ್ಥೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ಶನಿವಾರ ಮೈಸೂರಿನಲ್ಲಿ ರಾಮಕೃಷ್ಣ ಆಶ್ರಮದಿಂದ ನಿರ್ಮಿಸಲಾಗಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅವರು,ಭಾರತದ ಯುವಶಕ್ತಿಯಿಂದಾಗಿಯೇ ಇಂದು ಭಾರತವು ವಿಶ್ವದಲ್ಲೇ 3ನೇ ಅತಿ ದೊಡ್ಡ ಸ್ಟಾರ್ಟ್ಅಪ್ ವ್ಯವಸ್ಥೆ ಹೊಂದಿದೆ ಎಂದು ತಿಳಿಸಿದರು. ದೇಶವೇ ಮೊದಲು. ಯುವಕರೇ ದೇಶದ ಶಕ್ತಿಯಾಗಿದ್ದಾರೆ. ದೇಶದ ಅಭಿವೃದ್ಧಿಗೆ ಯುವ ಶಕ್ತಿ ಅತ್ಯಗತ್ಯವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹಳ ಮಹತ್ವವಾದದ್ದು, ಹಾಗಾಗಿ ಯುವಕರಿಗೆ ಸರಿಯಾದ…