Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಣೆಕಟ್ಟು ತುಂಬಿದಾಗ ನದಿಗೆ ನೀರು ಹರಿಸಲೇಬೇಕಾಗುತ್ತದೆ; ಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: ಮೈಸೂರು ಜಿಲ್ಲೆಯ ಎಚ್.ಡಿ.,ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನದಿಗೆ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಾಗದು. ಹಾಗಾಗಿ ಜಲಾಶಯದಿಂದ ನೀರು ಬಿಡಬಾರದೆಂದು ಸಂಘಟನೆಗಳು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಮನವಿ ಮಾಡಿದರು.
ಶನಿವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಕಬಿನಿ ಜಲಾಶಯದ ನೀರಿನ ಸಂಗ್ರಹಣೆ ಬಗ್ಗೆ ಅಧಿಕಾರಿಗಳು ಪ್ರತಿ ಗಂಟೆಗೊಮ್ಮೆ ನನಗೆ ಮಾಹಿತಿ ನೀಡುತ್ತಿದ್ದಾರೆ. ಪ್ರಕೃತಿ ಯಾರ ಸ್ವತ್ತೂ ಅಲ್ಲ. ಪ್ರಕೃತಿಯ ಅಣತಿಯಂತೆ ನಾವು ಬದುಕುತ್ತಿದ್ದೇವೆ. ನಾವು ನೀರು ಬಿಡುಗಡೆ ಮಾಡಲ್ಲ ಎಂದು ತೀರ್ಮಾನ ಮಾಡಿದರೂ, ಜಲಾಶಯ ತುಂಬಿದಾಗ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಹಾಗಾಗಿ ಹೋರಾಟಗಾರರು ನೀರು ಬಿಡುವ ಕಡೆ ಹೋಗಬಾರದು, ನದಿಯಲ್ಲಿ ನಿಂತು ನೀರು ಬಿಡಬಾರದು ಎಂದು ಪ್ರತಿಭಟನೆ ಮಾಡಬಾರದು. ನದಿಯಲ್ಲಿ ನೀರಿನ ಹರಿವು ಗೊತ್ತಾಗುವುದಿಲ್ಲ. ಆದ್ದರಿಂದ ನೀರಿನ ರಭಸಕ್ಕೆ ಕೊಚ್ಚಿ ಹೋಗಬಹುದು,ಯಾರೂ ನೀರಿಗೆ ಅಡ್ಡ ಮಲಗಲು ಹೋಗಬೇಡಿ ಎಂದು ಹೇಳಿದರು.
ನಮ್ಮ ಸ್ನೇಹಿತರು ತಮಿಳುನಾಡಿಗೆ ನೀರು ಹರಿಸಬಾರದೆಂದು ಹೋರಾಟ, ಬಂದ್ ಮಾಡುವುದಾಗಿ ಹೇಳುತ್ತಿದ್ದಾರೆ. ಒಂದು ಹೋರಾಟಕ್ಕೆ ಹಿನ್ನೆಲೆ ಇರಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಹೋರಾಟಕ್ಕೂ ಗೌರವವಿದೆ. ಆದರೆ ಈಗ ಪ್ರತಿಭಟನೆ ಬೇಡ. ಕಾನೂನು ಚೌಕಟ್ಟಿಗೆ ತೊಂದರೆಯಾಗಬಾರದು, ಜನಜೀವನಕ್ಕೆ ತೊಂದರೆಯಾಗಬಾರದು, ತಮಿಳುನಾಡು ಸೇರಿದಂತೆ ನಾವೆಲ್ಲರೂ ಒಂದೇ ದೇಶದ ಪ್ರಜೆಗಳು ಎಂದು ತಿಳಿಸಿದರು.
ಮುಖ್ಯಮಂತ್ರಿಗಳಾಗಿದ್ದ ಎಸ್.ಬಂಗಾರಪ್ಪ, ಎಸ್ ಎಂ ಕೃಷ್ಣ, ಸಿದ್ದರಾಮಯ್ಯ, ದೇವೇಗೌಡರ ಕಾಲದಲ್ಲೂ ಸಂಕಷ್ಟ ಎದುರಾದಾಗ ಅಂದಿನ ಸಂದರ್ಭಕ್ಕೆ ತಕ್ಕಂತೆ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ನಾವು ಮಾಡಿದ್ದು ಸರಿ, ಅವರುಗಳು ಮಾಡಿದ್ದು ತಪುö್ಪ ಎಂದು ನಾವು ಹೇಳುವುದಿಲ್ಲ. ತಮಿಳುನಾಡಿಗೆ 177 ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶವಿದೆ. ಇದಕ್ಕೆ ಸುಪ್ರೀಂಕೋರ್ಟ್ ಕೂಡ ಬಲ ನೀಡಿದೆ. ನಾವು ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಬೇಕು. ಜೊತೆಗೆ ನಮ್ಮ ರೈತರನ್ನೂ ಕಾಪಾಡಬೇಕು. ನಮ್ಮ ರೈತರ ಹಿತವನ್ನು ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು
ಬಿಜೆಪಿಯವರು ಕಾವೇರಿ ನೀರಿನ ವಿಚಾರವಾಗಿ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನೂ ಸಹ ನಾನು ಗಮನಿಸಿದ್ದೇನೆ. ತಮಿಳುನಾಡಿನ ಸಂಸದರು, ವಿವಿಧ ಪಕ್ಷಗಳ ನಾಯಕರು ಅವರ ರಾಜಕೀಯ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದಾರೆ. ಅವರಿಗೂ ಎಲ್ಲಾ ಅರಿವಿದೆ. ಈ ಹಿಂದೆ ನಿಮ್ಮ ಸುಪರ್ಧಿಯಲ್ಲಿ ಅಣೆಕಟ್ಟು ಕಟ್ಟಿಕೊಳ್ಳಬಹುದು ಎಂದು ಹೇಳಿದ್ದರು. ಪ್ರಮಾಣ ಪತ್ರವನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದಕ್ಕೆ ದಾಖಲೆಗಳೂ ಸಹ ಇವೆ ಎಂದು ತಿಳಿಸಿದರು.
ಮೇಕೆದಾಟು ಅಣೆ ಕಟ್ಟು ನಿರ್ಮಾಣ ವಿಚಾರದಲ್ಲಿ ನಮಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ದ ಜಯ ಸಿಕ್ಕಿದೆ. ಸಂಸತ್ ನಲ್ಲೂ ಸಹ ಅವರ ಜಾಗದಲ್ಲಿ ಅಣೆಕಟ್ಟು ಕಟ್ಟಿಕೊಳ್ಳಲು ಕಾನೂನು ಏನು ಹೇಳುತ್ತದೆ ಎಂದು ತುಂಬಾ ಚೆನ್ನಾಗಿ ಉತ್ತರ ನೀಡಲಾಗಿದೆ ಎಂದರು.
ತುಂಗಭದ್ರಾ ಡ್ಯಾಂ ವಿಚಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸಭೆ ನಡೆಸಿ, ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿದೆ. ಅವರು ಸಹ ಸಮಿತಿ ರಚನೆ ಮಾಡುವುದಾಗಿ ತಿಳಿಸಿದ್ದಾರೆ. ನಾನು ಮುಖ್ಯಮಂತ್ರಿ ಆದ ಮೇಲೆ ನಡೆದ ಐತಿಹಾಸಿಕ ತೀರ್ಮಾನ, ಐತಿಹಾಸಿಕ ಹೆಜ್ಜೆ ಇದು ಎಂದು ಹೇಳಿದರು. ಕಬಿನಿಗೆ ಬಾಗಿನ ಅರ್ಪಿಸುವುದು ಈಗ ಬೇಡ ತಡೆಯಿರಿ. ಏನೂ ಇಲ್ಲದೇ ಈಗಾಗಲೇ ನಮ್ಮ ವಿರುದ್ಧ ದಾಳಿ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.
ಶುಭಮುಹೂರ್ತ, ಶುಭ ಘಳಿಗೆಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಆದ ಮೇಲೆ ಮೈಸೂರಿಗೆ ಬಂದಿದ್ದೇನೆ. ಚಾಮುಂಡಿ ತಾಯಿಗೆ ನಮಿಸಲಿದ್ದೇನೆ. ಮೈಸೂರಿನ ನೆಲದಿಂದ ಸ್ವಾಮಿ ವಿವೇಕಾನಂದ ಅವರು ಅಂದು ದೊಡ್ಡ ಸಂದೇಶ ನೀಡಿದ್ದಾರೆ. ಅಂದಿನ ಕಾಲದಲ್ಲೇ ನಮ್ಮ ಮೈಸೂರು ಮಹಾರಾಜರು ಶೈಕ್ಷಣಿಕ, ಸಾಂಸ್ಕöÈತಿಕ ಕೊಡುಗೆಯನ್ನು ಈ ರಾಜ್ಯಕ್ಕೆ ನೀಡಿದ್ದಾರೆ. ಅವರು ರಾಜ್ಯದ ಅಭಿವೃದ್ಧಿಗೆ ನೀಡಿದ ಉತ್ತೇಜನ ಯಾರೂ ಸಹ ಮರೆಯಲು ಸಾಧ್ಯವಿಲ್ಲ. ಇತಿಹಾಸ ಮರೆತವನು, ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಬಾಬಾ ಸಾಹೇಬರು ಹೇಳಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ನುಡಿದರು.