
ಮೈಸೂರು; ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಆ.13 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ನ್ನು ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಕನ್ನಡ ಚಳುವಳಿಗಾರರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಭಾನುವಾರ ಮೈಸೂರಿನ ಆರ್ ಗೇಟ್ ಬಳಿ ಪ್ರತಿಭಟನಾ ಧರಣಿ ನಡೆಸಿ ಮಾತನಾಡಿದ ಅವರು, ಸಮಗ್ರ ಕನ್ನಡಿಗರ ಪರವಾಗಿ ಆ.13 ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದೇವೆ.
ಕಾವೇರಿ ನೀರು ಒಂದೇ ವಿಚಾರ ಅಲ್ಲ , ಗಡಿ ಸಮಸ್ಯೆ, ಯುವಕರಿಗೆ ಉದ್ಯೋಗ,
ಮೈಸೂರಿನ ಸಮಗ್ರ ಅಭಿವೃದ್ಧಿ, ಕಾವೇರಿ ನೀರು ಹಂಚಿಕೆ ವಿಚಾರ, ಬೆಳಗಾವಿ ಎಂಇಎಸ್ ಪುಂಡಾಟ ಸೇರಿದಂತೆ ಹಲವು ವಿಚಾರ ಮುಂದಿಟ್ಟು ಕರ್ನಾಟಕ ಬಂದ್ ಕರೆ ಕೊಟ್ಟಿದ್ದೇವೆ. ಸಿಎಂ ಡಿಕೆ ಶಿವಕುಮಾರ್ ಬಂದ್ ವಾಪಸ್ ಪಡೆಯಿರಿ ಎಂದು ಮನವಿ ಮಾಡಿದ್ದಾರೆ.
ನಾವು ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯಲ್ಲ. ಈಗಾಗಲೇ ದಿನಾಂಕವನ್ನೂ ನಿಗಧಿ ಮಾಡಲಾಗಿದೆ.
ಆ.13 ರಂದು ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ. ಸಿಎಂ ಡಿಕೆ ಶಿವಕುಮಾರ್ ಕೂಡ ಬರಲಿ, ವೀಳ್ಯದೆಲೆ ನೀಡಿ ಸ್ವಾಗತಿಸ್ತೇವೆ. ಮಳೆ ಆಗಿದೆ ಅಂತಾ ತಮಿಳುನಾಡಿಗೆ ನೀರು ಬಿಡಬೇಡಿ. ನಮ್ಮ ನಾಲೆಗಳಿಗೆ ನೀರು ಹರಿಸಬೇಕೆಂದು ಕರ್ನಾಟಕ ಬಂದ್ ಮಾಡುತ್ತಿದ್ದೇವೆ. ಬಂದ್‌ನಿAದ ಯಾರಿಗೂ ನಷ್ಟ ಆಗುವುದಿಲ್ಲ ಎಂದು ಹೇಳಿದರು. ಈ ವೇಳೆ ಮುಖಂಡರಾದ ಮೂಗೂರು ನಂಜುAಡಸ್ವಾಮಿ, ತೇಜಸ್ ಲೋಕೇಶ್‌ಗೌಡ ಮತ್ತಿತರರು ಹಾಜರಿದ್ದರು.