Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕ್ರೀಡೆ ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ; ಎಚ್.ವಿ.ರಾಜೀವ್


ಮೈಸೂರು: ಕ್ರೀಡೆ ಕೇವಲ ಮನೋರಂಜನೆ ಮಾತ್ರವಲ್ಲ, ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹೇಳಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ರಾಜರಾಜೇಶ್ವರಿ ನಗರದ ಸ್ಪೋರ್ಟ್್ಸ ಪಾರ್ಕ್ನಲ್ಲಿ ಭಾನುವಾರ ನಾಲ್ನನೇ ವರ್ಷದ ರಾಜ್ಯ ಮಟ್ಟದ ಸಾರಿಗೆ ನೌಕರರ ‘ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ಸ್ಪರ್ಧೆಯನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ಕ್ರೀಡೆ ಅಥವಾ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶರೀರ ಮತ್ತು ಮನಸ್ಸು ಸದೃಢವಾಗುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಿ, ಹೃದಯದ ಆರೋಗ್ಯವನ್ನು ಕಾಪಾಡುತ್ತದೆ, ತೂಕವನ್ನು ಸಮತೋಲನದಲ್ಲಿಡುತ್ತದೆ. ಮಾನಸಿಕ ಒತ್ತಡ ಹಾಗೂ ಖಿನ್ನತೆಯನ್ನು ಕಡಿಮೆ ಮಾಡಿ ಉತ್ತಮ ನಿದ್ರೆ ಬರಲು ಸಹಾಯ ಮಾಡುತ್ತದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಜೀವನದಲ್ಲಿ ಕಂಡುಕೊAಡ ಗುರಿ, ಉದ್ದೇಶವನ್ನು ಈಡೇರಿಸಿಕೊಳ್ಳಲು ಆರೋಗ್ಯವಂತ ಮನಸ್ಸು ಮತ್ತು ಶರೀರದ ಅವಶ್ಯಕತೆ ಇದೆ ಎಂದು ಪ್ರಸ್ತುತ ದಿನಗಳಲ್ಲಿ ಯಾವುದೇ ವ್ಯಕ್ತಿಗಳು ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಲು ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಾರಿಗೆ ಇಲಾಖೆ?ಂಲ್ಲಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ನೌಕರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿಗಮದ ಅಧಿಕಾರಿಗಳಾದ ಶಿವರಾಜೇಗೌಡ, ಶಿವಪ್ರಕಾಶ್, ಎಂ.ರಾಜೇಶ್, ಸತೀಶ್ ಬೋರೇಗೌಡ, ಕಾರ್ಮಿಕ ಮುಖಂಡರಾದ ಮಲ್ಲಯ್ಯ ರಾಜೇಶ್, ರಕ್ತದಾನಿ ಮಹದೇವಸ್ವಾಮಿ ಮತ್ತಿತರರು ಹಾಜರಿದ್ದರು.