Skip to main content

3Kaala News

ಸುಭಾಷಿತ 

ಅತಿಯಾಗಿ ಯಾರನ್ನೂ ಒತ್ತಾಯಪೂರ್ವಕವಾಗಿ ನಿಮ್ಮ ಜೀವನದಲ್ಲಿ ಉಳಿಸಿಕೊಳ್ಳಬೇಡಿ…”
ಅತಿಯಾಗಿ ಯಾರನ್ನೂ ಹಿಡಿದುಕೊಳ್ಳಲು ಪ್ರಯತ್ನಿಸಬೇಡಿ.
ಉಳಿಯುವ ಮನಸ್ಸಿದ್ದವರು ಕಾರಣವಿಲ್ಲದೆ ಉಳಿಯುತ್ತಾರೆ.
ಹೋಗುವ ಮನಸ್ಸಿದ್ದವರನ್ನು ಹಿಡಿದಿಟ್ಟರೂ ಪ್ರಯೋಜನವಿಲ್ಲ.
ಒತ್ತಾಯದಿಂದ ಉಳಿದ ಸಂಬಂಧಕ್ಕೆ ಆತ್ಮೀಯತೆ ಇರುವುದಿಲ್ಲ.
ಪ್ರೀತಿಯನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.
ಗೌರವವನ್ನು ಬಲವಂತದಿಂದ ಗಳಿಸಲಾಗುವುದಿಲ್ಲ.
ನಿಮ್ಮ ವ್ಯಕ್ತಿತ್ವವೇ ನಿಮ್ಮ ದೊಡ್ಡ ಆಸ್ತಿ.
ಅದನ್ನು ಯಾರಿಗಾಗಿ ಕಳೆದುಕೊಳ್ಳಬೇಡಿ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನಡೆಯುತ್ತಿರುವ “ಗಾಂಧಿ ಶಿಲ್ಪ ಬಜಾರ್” ಮೇಳ


ಮೈಸೂರು; ನಗರದ ಹೆಬ್ಬಾಳ್ ನಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನಡೆಯುತ್ತಿರುವ “ಗಾಂಧಿ ಶಿಲ್ಪ ಬಜಾರ್” ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನೋಡುಗರ ಕಣ್ಮನ ಸೆಳೆಯುತ್ತಿದ್ದು, ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಅಭಿವೃದ್ಧಿ ಆಯುಕ್ತರು (ಕರಕುಶಲ), ಜವಳಿ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ಹಾಗೂ ಜೆಎಸ್‌ಎಸ್ ಮಹಾವಿದ್ಯಾಪೀಠದ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಮೇಳವು ಗುಣಮಟ್ಟದ ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳ ವೈಭವವನ್ನು ಒಂದೇ ಸೂರಿನಡಿ ಪರಿಚಯಿಸುತ್ತಿದೆ.
ದಕ್ಷಿಣ ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿರುವ 50ಕ್ಕೂ ಹೆಚ್ಚು ಕರಕುಶಲಕರ್ಮಿಗಳು ಹಾಗೂ ಕೈಮಗ್ಗ ನೇಕಾರರು ತಮ್ಮ ಕೈಚಳಕದಿಂದ ಮೂಡಿಬಂದ ಅಪರೂಪದ ಕಲಾಕೃತಿಗಳು ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿದ್ದಾರೆ. ಕೈಮಗ್ಗ ಸೀರೆಗಳು, ಉಡುಪುಗಳು, ಮರದ ಕೆತ್ತನೆ ಕಲಾಕೃತಿಗಳು, ಲೋಹದ ಶಿಲ್ಪಗಳು, ಟೆರಾಕೋಟಾ ವಸ್ತುಗಳು, ಬಿದಿರಿನ ಕರಕುಶಲ ಉತ್ಪನ್ನಗಳು, ಗೃಹೋಪಯೋಗಿ ಹಾಗೂ ಅಲಂಕಾರಿಕ ವಸ್ತುಗಳು ಖರೀದಿದಾರರ ಗಮನ ಸೆಳೆಯುತ್ತಿವೆ.
ಮೇಳದಲ್ಲಿ ವಿಶೇಷ ಆಕರ್ಷಣೆಯಾಗಿ ಕಲಾವಿದ ಶ್ರೀಧರ್ ಅವರ ಮೈಸೂರು ಸಾಂಪ್ರದಾಯಿಕ ಚಿತ್ರಕಲೆ ಪ್ರದರ್ಶನಗೊಂಡಿದ್ದು, ಶ್ರೀಕೃಷ್ಣನ ವೃಷಭ ವಧೆ, ಬಕ ವಧೆ, ಶಿವ ಕುಟುಂಬ, ಹಾಗೂ ಶ್ರೀ ಚಾಮುಂಡೇಶ್ವರಿ ದೇವಿಯ ಮಹಿಷಾಸುರ ಮರ್ಧಿನಿ ರೂಪದ ಅದ್ಭುತ ಚಿತ್ರಣಗಳು ಕಲಾಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತಿವೆ. ಮೈಸೂರಿನ ಸಾಂಪ್ರದಾಯಿಕ ಚಿತ್ರಕಲೆಯ ಸೊಬಗನ್ನು ಪ್ರತಿಬಿಂಬಿಸುವ ಈ ಕಲಾಕೃತಿಗಳು ವೀಕ್ಷಕರಿಂದ ಪ್ರಶಂಸೆಗೆ ಪಾತ್ರವಾಗಿವೆ.
ಕೇರಳ ರಾಜ್ಯದ ಶ್ರೀಮತಿ ನಸೀಮಾ ಅವರ ಮಳಿಗೆಯಲ್ಲಿರುವ ವಿಶಿಷ್ಟ ಮೆಟಲ್ ವೈರ್ ಆರ್ಟ್ ಕಲಾಕೃತಿಗಳು ತಮ್ಮ ಸೂಕ್ಷ÷್ಮ ವಿನ್ಯಾಸಗಳಿಂದ ಎಲ್ಲರ ಗಮನ ಸೆಳೆಯುತ್ತಿವೆ. ಶ್ರೀ ಕಲಾಯಿ ಸೆಲ್ವಿ ಅವರ ಮಳಿಗೆಯಲ್ಲಿ ನೈಸರ್ಗಿಕ ನಾರಿನಿಂದ (ಗೆರೆತೆ) ತಯಾರಿಸಲಾದ ಪರಿಸರ ಸ್ನೇಹಿ ಅಲಂಕಾರಿಕ ಹಾಗೂ ಗೃಹೋಪಯೋಗಿ ವಸ್ತುಗಳು ಉತ್ತಮ ಬೇಡಿಕೆ ಪಡೆದುಕೊಂಡಿವೆ. ರಾಜ್ಯ ಪ್ರಶಸ್ತಿ ಪುರಸ್ಕöÈತ ಶ್ರೀ ಕುಮಾರ್ ಅವರ ಮೈಸೂರು ರೋಸ್‌ವುಡ್ ಇನ್‌ಲೇ ಕಲಾಕೃತಿಗಳು ಕಲಾಪ್ರಿಯರನ್ನು ವಿಶೇಷವಾಗಿ ಆಕರ್ಷಿಸುತ್ತಿವೆ.
ಬಿದಿರಿನಿಂದ ತಯಾರಿಸಲಾದ ವೈವಿಧ್ಯಮಯ ಕರಕುಶಲ ಉತ್ಪನ್ನಗಳೂ ಮೇಳದ ಪ್ರಮುಖ ಆಕರ್ಷಣೆಗಳಾಗಿವೆ.
ಆಗಮಿಸುತ್ತಿರುವ ಸಾರ್ವಜನಿಕರು ಗುಣಮಟ್ಟದ, ಸಾಂಪ್ರದಾಯಿಕ ಹಾಗೂ ನೇರವಾಗಿ ಕರಕುಶಲಕರ್ಮಿಗಳಿಂದಲೇ ದೊರೆಯುವ ಉತ್ಪನ್ನಗಳನ್ನು ಖರೀದಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕರಕುಶಲಕರ್ಮಿಗಳಿಗೆ ನೇರ ಮಾರುಕಟ್ಟೆ ಒದಗಿಸುವುದರ ಜೊತೆಗೆ ಭಾರತೀಯ ಸಾಂಪ್ರದಾಯಿಕ ಕಲೆ ಮತ್ತು ಸಂಸ್ಕöÈತಿಯ ವೈಭವವನ್ನು ಜನತೆಗೆ ಪರಿಚಯಿಸುವಲ್ಲಿ ಗಾಂಧಿ ಶಿಲ್ಪ ಬಜಾರ್ ಮಹತ್ವದ ವೇದಿಕೆಯಾಗಿದೆ.
ಮೇಳವು ಆ.03 ರವರೆಗೆ ಪ್ರತಿದಿನ ಬೆಳಿಗ್ಗೆ 10.30 ಗಂಟೆಯಿAದ ರಾತ್ರಿ 9.00 ಗಂಟೆಯವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ. ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಉಚಿತ ವಾಹನ ನಿಲುಗಡೆ (ಪಾರ್ಕಿಂಗ್) ವ್ಯವಸ್ಥೆಯೂ ಕಲ್ಪಿಸಲಾಗಿದೆ.