Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಎಸಿ, ಆಪ್ತ ಸಹಾಯಕ


ಮೈಸೂರು: ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಅವರ ಆಪ್ತಸಹಾಯಕ ಶಿವಕುಮಾರ್ ಲಂಚ ಪಡೆಯುವಾಗ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಒಂದು ವರ್ಷದಿಂದ ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬAಧಿಸಿದ ಪ್ರಕರಣದ ವಿಚಾರಣೆ ನಡೆಯುತಿತ್ತು. ಇದಕ್ಕೆ ಸಂಬAಧಿಸಿದAತೆ ಬೆಂಗಳೂರಿನ ನಿವಾಸಿ ಡಾ.ರೂಪಾ ಅವರ ಬಳಿ ಉಪವಿಭಾಗಧಿಕಾರಿ 10.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಮೊದಲ ಕಂತಾಗಿ 5 ಲಕ್ಷ ತೆಗೆದುಕೊಂಡಿದ್ದರು.
2ನೇ ಕಂತು 5.50 ಲಕ್ಷವನ್ನು ಕೊಡುವಾಗ ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಉಪವಿಭಾಗಾಧಿಕಾರಿಯು ಹಣವನ್ನು ಮನೆಯಲ್ಲಿ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಕಾವ್ಯಾರಾಣಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಶೈಲೇಂದ್ರ ತಿಳಿಸಿದ್ದಾರೆ.