Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಚಿವ ಸ್ಥಾನ ಸಿಗದಕ್ಕೆ ಶಾಸಕ ತನ್ವೀರ್ ಸೇಠ್ ತೀವ್ರ ಬೇಸರ ; ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ


ಮೈಸೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮೈಸೂರಿನ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಪಕ್ಷದ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ತೀವ್ರ ನಿರಾಸೆಯಾಗಿದೆ, ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧವಾಗಿರುತ್ತದೆ ಎಂದು ಹೇಳಿದರು.
ರಾಹುಲ್ ಗಾಂಧಿ ಕುರಿತು ಹೇಳಲಾದ ಒಂದೇ ಒಂದು ಪದಕ್ಕೆ ರಾಜಣ್ಣ ಅವರು ಸ್ಥಾನ ಕಳೆದುಕೊಂಡರು. ಆದರೆ ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿದವರ ವಿರುದ್ಧ ಯಾವುದೇ ಕ್ರಮವಾಗಲಿಲ್ಲ. ಜಮೀರ್ ಅಹ್ಮದ್ ಮಾತ್ರವಲ್ಲ, ಹಲವರು ಪಕ್ಷದ ವರ್ಚಸ್ಸನ್ನು ಕಡೆಗಣಿಸಿದ್ದಾರೆ. ಅಂತಹವರಿಗೆ ಸಚಿವ ಸ್ಥಾನ ನೀಡಿದ್ದಾರೆ. ನನ್ನಂತಹ ನಿಷ್ಠರಿಗೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ದೆಹಲಿಗೆ ಹೋಗಿ ನಾನು ಲಾಬಿ ಮಾಡಲಿಲ್ಲ, ಈಗಲೂ ಮಾಡುವುದಿಲ್ಲ. ಪಕ್ಷ ನಮ್ಮನ್ನು ಕಡೆಗಣಿಸಿದೆ. ನನ್ನ ಅವಕಾಶ ತಪ್ಪಲು ರಾಜ್ಯದ ಕೆಲ ನಾಯಕರ ಕೈವಾಡ ವಿದೆ. ಹೈಕಮಾಂಡ್‌ನಿAದ ನನಗೆ ಯಾವುದೇ ಅನ್ಯಾಯವಾಗಿಲ್ಲ, ತಪುö್ಪ ರಾಜ್ಯ ನಾಯಕರಿಂದಾಗಿದೆ. ಯಾರಿಂದ ಅವಕಾಶ ತಪ್ಪಿದೆ ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ ಎಂದು ಹೇಳಿದರು.
ಯಾವುದೇ ನಿಗಮ-ಮಂಡಳಿ ಸ್ಥಾನವೂ ಬೇಡ ಎಂದು ಹೇಳಿದ್ದೆ. ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ಸಿಗುತ್ತದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಆ ವಿಶ್ವಾಸವನ್ನು ಪಕ್ಷವೇ ಹುಸಿಗೊಳಿಸಿದೆ. ನಮ್ಮ ಜಿಲ್ಲೆ ಯವರೇ ಮುಖ್ಯಮಂತ್ರಿ ಆಗಿರುವ ಕಾರಣ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದಾಗಲೂ ಮೌನವಾಗಿದ್ದೆ ಎಂದು ಬೇಸರದಿಂದಲೇ ನುಡಿದರು.
ನಾನು ಯಾರ ವಿರುದ್ಧವೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ. ಅದಕ್ಕೂ ಒಂದು ಕಾಲ ಬರು ತ್ತದೆ. ನನ್ನ ಕೋಪ, ನೋವು ಮತ್ತು ಬೇಸರವನ್ನು ಯಾವುದೇ ಪದಗಳಲ್ಲಿ ವ್ಯಕ್ತಪಡಿಸದೆ, ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಉಳಿದಿದ್ದೇನೆ ಎಂದು ಹೇಳಿದರು.
ಮೈಸೂರು ನಗರ ಹಾಗೂ ಜಿಲ್ಲೆಗೆ ಸೇವೆ ಮಾಡುವ ಅವಕಾಶ ಕಸಿದುಕೊಳ್ಳಲಾಗಿದೆ. ಅಭಿಮಾನಿಗಳು ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಪಕ್ಷದ ಮೇಲೆ ಇದ್ದ ನಂಬಿಕೆ ಕುಸಿದಿದೆ ಎಂದು ತಿಳಿಸಿದರು.
ಮಗು ಅತ್ತರೆ ಮಾತ್ರ ತಾಯಿ ಹಾಲು ಕೊಡುತ್ತಾಳೆ ಎಂಬ ಪರಿಸ್ಥಿತಿ ರಾಜಕಾರಣದಲ್ಲೂ ಬಂದಿದೆಯೇ ಎಂಬ ಅನುಮಾನ ಮೂಡಿದೆ. ರಾಜ ಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.