Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಥನಾಲ್ ಉತ್ಪಾದನೆ, ಬಳಕೆಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿ; ಕುರುಬೂರು ಶಾಂತಕುಮಾರ್


ಮೈಸೂರು; ಎಥನಾಲ್ ಉತ್ಪಾದನೆ ಹಾಗೂ ಬಳಕೆಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟಿಯ ಕಬ್ಬು ಬೆಳೆಗಾರರ ಸಂಘದ ರಾಷ್ಟಿçÃಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ
ಕಬ್ಬು, ಭತ್ತ , ಮೆಕ್ಕೆಜೋಳ ಇನ್ನಿತರ ಕೃಷಿ ಉತ್ಪನ್ನಗಳಿಂದ ಉತ್ಪಾದಿಸುವ ಎಥನಾಲ್ ಬಳಕೆಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಿರುವುದು ಸ್ವಾಗತ. ಆದರೆ ಕೆಲವೊಂದು ವಿರೋಧ ಪಕ್ಷಗಳು ಹಾಗೂ ಸಂಘಟನೆಗಳು ಎಥನಾಲ್ ಬಳಕೆ ಹಾನಿಕಾರಕ, ವಾಹನಗಳ ಯಂತ್ರಗಳಿಗೆ ದುಷ್ಪರಿಣಾಮ ಬೀರುತ್ತದೆ ಹಾಗೂ ಮೈಲೇಜ್ ಕಡಿಮೆಯಾಗುತ್ತದೆ ಎಂದು ತಪ್ಪಾಗಿ ಬೆಂಬಿಸಲಾಗುತ್ತಿದೆ. ವಿದೇಶದಲ್ಲಿ ಪೆಟ್ರೋಲಿಯಂ ಉತ್ಪಾದಿಸುವ ಕಂಪನಿಗಳ ಲಾಭಿಯ ಒತ್ತಡಕ್ಕೆ ಮಣಿದು ಈ ರೀತಿ ಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ದೇಶಿಯ ಉತ್ಪನ್ನವಾದ ಎಥನಾಲ್ ಹೆಚ್ಚು ಉತ್ಪಾದಿಸಿ ಬಳಸುವುದರಿಂದ ರೈತರಿಗೆ ಹೆಚ್ಚು ಆದಾಯ ಬರುತ್ತದೆ ಹಾಗೂ ಪರಿಸರ ಸ್ನೇಹಿಯಾಗಿರುವ ಎಥನಾಲ್ ನಿಂದ ದೇಶದ ತಲಾ ವರಮಾನ ಜಾಸ್ತಿಯಾಗುವುದರ ಜೊತೆಗೆ, ದೇಶ ಆರ್ಥಿಕವಾಗಿ ಸ್ವಾವಲಂಬಿಯಾಗಲು ಸಾಧ್ಯವಾಗುತ್ತದೆ. ಅಂತರಾಷ್ಟಿçÃಯ ಮಟ್ಟದಲ್ಲಿ ಭಾರತಕ್ಕೆ ಕಚ್ಚಾತೈಲದ ಅವಲಂಬನೆ ಕಡಿಮೆಯಾಗುತ್ತದೆ ಹಾಗೂ ಆಮದು ಕಡಿಮೆಯಾಗಿ, ದೇಶಕ್ಕೆ 4 ಲಕ್ಷ ಕೋಟಿ ವಿದೇಶಿ ವಿನಿಮಯ ಹಣ ಉಳಿತಾಯವಾಗುತ್ತದೆ. ಇದರಿಂದ ದೇಶದ ಆರ್ಥಿಕತೆ ಸದೃಢವಾಗುತ್ತದೆ. ಈ ಹಣದಿಂದ ಇನ್ನಿತರ ಮೂಲ ಸೌಕರ್ಯ ಗಳಿಗೆ ಹೆಚ್ಚು ಹೊತ್ತು ನೀಡಲು ಸಾಧ್ಯವಾಗುತ್ತದೆ. ಹಾಗಾಗಿ
ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯಬಾರದು, ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು
ಎಥನಾಲ್ ವಿಚಾರದಲ್ಲಿ ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಎಂದು ಆಗ್ರಹಿಸಿದ್ದಾರೆ.