ನಿಮಾನ್ಸ್ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭಿಸದಿದ್ದರೆ ಉಸ್ತುವಾರಿ ಸಚಿವರ ಮನೆಗೆ ಮುತ್ತಿಗೆ
ಮೈಸೂರು; ಮೈಸೂರು ತಾಲ್ಲೂಕಿನ ವರುಣ ಹೋಬಳಿಯ ಗುಡುಮಾದನಹಳ್ಳಿ ಗ್ರಾಮದ ಸರ್ವೆ ನಂ.8, 60 ಮತ್ತು 68 ಗಳಲ್ಲಿ ಸುಮಾರು 20 ಎಕರೆ ಸರ್ಕಾರಿ ಭೂಮಿಯಲ್ಲಿ ರೂ.100 ಕೋಟಿ ವೆಚ್ಚದ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಆಸ್ಪತ್ರೆಯನ್ನು ಅತೀ ಶೀಘ್ರವಾಗಿ ನಿರ್ಮಾಣ ಮಾಡಬೇಕೆಂದು ಮೈಸೂರು ಜಿಲ್ಲಾ ಮಹಿಳಾ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಕೆ.ಉಮಾಮಹೇಶ್ವರಿ ಆಗ್ರಹಿಸಿದರು.
ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಮಾದರಿಯಲ್ಲಿ ಮೈಸೂರು ಭಾಗದಲ್ಲಿಯೂ ಸಹ ನಿಮಾನ್ಸ್ ಆಸ್ಪತ್ರೆಯನ್ನು ಸರ್ಕಾರವು ನಿರ್ಮಾಣಕ್ಕೆ ಮುಂದಾಗಿರುವ ಯೋಜನೆಯನ್ನು ಮೈಸೂರು ಜಿಲ್ಲೆ ಮಹಿಳಾ ಸಂಘಟನೆಗಳ ಒಕ್ಕೂಟವು ಸ್ವಾಗತಿ ಬೆಂಬಲಿಸುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 2025-26ನೇ ಸಾಲಿನಲ್ಲಿ ರೂ.100 ಕೋಟಿ ಅಯವ್ಯಗಳಲ್ಲಿ ನಿಗದಿಪಡಿಸಿ, ಮೈಸೂರಿನ ಭಾಗದ ಜನತೆಗೆ ಅನುಕೂಲವಾಗಲೆಂದು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಆಸ್ಪತ್ರೆಯನ್ನು ನಿರ್ಮಾಣ ಮಾಡುವ ಯೋಜನೆಯನ್ನು ಜಾರಿಗೊಳಿಸಿದರು. ಇದರಿಂದ ಮೈಸೂರು , ಮಂಡ್ಯ , ಚಾಮರಾಜನಗರ ಮತ್ತು ಕೊಡುವ ಜಿಲ್ಲೆಗಳ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಆದುದರಿಂದ ಈಗಾಗಲೇ ಸಂಬAಧಪಟ್ಟ ಇಲಾಖೆಗೆ ಆರೋಗ್ಯ ಇಲಾಖೆಗೆ ಭೂ ಹಸ್ತಾಂತರ ಅಗಿರುವುದರಿಂದ ಅತೀ ಶೀಘ್ರವಾಗಿ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಯದಿದ್ದಲ್ಲಿ ಅಧಿಕಾರಿಗಳ ವಿರುದ್ಧ ತಮಟೆ ಚಳುವಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮನೆಯನ್ನು ಮತ್ತಿಗೆ ಹಾಕಲು ಒಕ್ಕೂಟವು ನಿರ್ಧರಿಸುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಂಜಲಿ ಆರ್, ಜಿಲ್ಲಾ ಉಪಾಧ್ಯಕ್ಷೆ ವಸಂತಕುಮಾರಿ ಆರ್, ಸಂಘಟನಾ ಕಾರ್ಯದರ್ಶಿ ಭಾಗ್ಯಲಕ್ಷಿö್ಮ, ಕಾರ್ಯದರ್ಶಿ ಪವಿತ್ರ, ಖಜಾಂಚಿ ದಾಕ್ಷಾಯಿಣಿ ಉಪಸ್ಥಿತರಿದ್ದರು.
--°C
Mysore, IN
Loading...