Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಮೈಸೂರು ಪಾಕ, ಅರಿಶಿಣ, ಕುಂಕುಮ, ಬಳೆ ವಿತರಣೆ


ಮೈಸೂರು; ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಮೈಸೂರು ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಚಾಮುಂಡಿಬೆಟ್ಟದ ಪಾದದ ಬಳಿ ಆಗಮಿಸಿದ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ ನೀಡಲಾಯಿತು.
ತಾಯಿ ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಸಾವಿರಾರೂ ಭಕ್ತಾಧಿಗಳು ತಾಯಿಗೆ ಹರಕೆ ತಿರಿಸಲು ಬೆಟ್ಟದ ಪಾದದಿಂದ ಬೆಟ್ಟದ ಮೇಲೆ ವರೆಗೂ ಅರಿಶಿನ ಕುಂಕುಮ ಹಚ್ಚುತ್ತಾರೆ. ಅಂತಹ ಮಹಿಳಾ ಭಕ್ತಾಧಿಗಳಿಗೆ ಅರಿಶಿನ ಕುಂಕುಮ ಹಾಗೂ ಬಳೆಗಳನ್ನು ನೀಡಿ ಮೈಸೂರ್ ಪಾಕ್ ವಿತರಿಸಿ ಅವರಿಗೆ ತಾಯಿ ಚಾಮುಂಡೇಶ್ವರಿ ಒಳಿತನ್ನು ನೀಡಲಿ ಎಂದು ಹಾರೈಸಿದರು
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮ ಮಂಡಳಿಯ ಮಾಜಿ ನಿರ್ದೇಶಕಿ ರೇಣುಕಾರಾಜ್, ಶ್ರೀ ದುರ್ಗಾಪೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ರಂಜಿತಾ ಸುಬ್ರಹ್ಮಣ್ಯ, ಶ್ವೇತಾ ಅಶೋಕ್, ರಮ್ಯಾ, ಲತಾ, ಹಾಗೂ ಇನ್ನಿತರರು ಹಾಜರಿದ್ದರು.