
ಮೈಸೂರು: 80ನೇ ಸ್ವಾತಂತ್ರೊತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನ 2026: 80 ತ್ಯಾಜ್ಯಮುಕ್ತ ತಾಣಗಳು'' ಅಭಿಯಾನದ ಭಾಗವಾಗಿ, ಬುಧವಾರ ಬೆಳಿಗ್ಗೆ ಚಿಕ್ಕ ವೀರಣ್ಣ ರಸ್ತೆ (ಸಿ.ವಿ. ರಸ್ತೆ) ಪ್ರದೇಶದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಾಚರಣೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಞಜಿಣe ಸವಿತಾ ಎಂ.ಕೆ., ಹೆಚ್ಚುವರಿ ಆಯುಕ್ತೆ ವೀಣಾ, ಪಾಲಿಕೆ ಅಧೀಕ್ಷಕ ಅಭಿಯಂತರ ಸಿಂಧು, ಮುಖ್ಯ ಲೆಕ್ಕಾಧಿಕಾರಿ ಶ್ವೇತಾ, ಕಾರ್ಯಪಾಲಕ ಅಭಿಯಂತರರಾದ ಮೃತ್ಯುಂಜಯ (ಪರಿಸರ), ಶ್ರೀನಿವಾಸ್ (ಸಿವಿಲ್), ಮೋಹನ್ (ಯುಜಿಡಿ) ಹಾಗೂ ದೀಪಕ್ (ವಿದ್ಯುತ್), ವಲಯ ಸಹಾಯಕ ಆಯುಕ್ತರಾದ ರತ್ನಾಂಬಿಕಾ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪರಿಸರ ಅಭಿಯಂತರರು, ವಲಯ 7ರ ಸಿಬ್ಬಂದಿ, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು, ಪೌರಕಾರ್ಮಿಕರು, ಸ್ಥಳೀಯ ನಿವಾಸಿಗಳು ಹಾಗೂ ಸಿ.ವಿ. ರಸ್ತೆ ನಿವಾಸಿಗಳ ಸಂಘದ ಪದಾಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. ಕಾರ್ಯಾಚರಣೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಮಿಶ್ರ ತ್ಯಾಜ್ಯ, ಹಳೆಯ ವಸ್ತುಗಳು, ಲೋಹದ ಅವಶೇಷಗಳು, ಪ್ಲಾಸ್ಟಿಕ್, ಕಟ್ಟಡ ಅವಶೇಷಗಳು ಹಾಗೂ ಇತರೆ ತ್ಯಾಜ್ಯವನ್ನು ತೆರವುಗೊಳಿಸಲಾಯಿತು. ಈ ಬೃಹತ್ ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಒಟ್ಟು ಸುಮಾರು 83 ಟನ್ ತ್ಯಾಜ್ಯವನ್ನು ತೆರವುಗೊಳಿಸಲಾಯಿತು. ಸ್ವಚ್ಛತಾ ಕಾರ್ಯಕ್ಕಾಗಿ 5 ಬ್ಯಾಕ್ಹೋ ಲೋಡರ್ಗಳು, 10 ಟಿಪ್ಪರ್ ವಾಹನಗಳು ಹಾಗೂ 5 ಡೋಜರ್ಗಳನ್ನು ಬಳಸಿಕೊಳ್ಳಲಾಯಿತು. ಸಾರ್ವಜನಿಕ ಸ್ಥಳ ಮತ್ತು ರಸ್ತೆ ಪ್ರದೇಶದಲ್ಲಿದ್ದ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಿ, ಸುಗಮ ಸಂಚಾರ ಹಾಗೂ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಯಿತು. ಪ್ರದೇಶದಲ್ಲಿರುವ ಅಂಗಡಿ ಮಾಲೀಕರು, ಗುಜರಿ ವ್ಯಾಪಾರಿಗಳು, ಲೋಹದ ಕೆಲಸದ ಮಳಿಗೆಗಳು ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳಿಗೆ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ರಸ್ತೆ ಬದಿಯಲ್ಲಿ ಸುರಿಯದಂತೆ ಸೂಚಿಸಲಾಯಿತು. ತಮ್ಮ ವ್ಯಾಪಾರ ಚಟುವಟಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪ್ರತ್ಯೇಕಿಸಿ, ಪಾಲಿಕೆ ಸೂಚಿಸಿರುವ ವೈಜ್ಞಾನಿಕ ವಿಧಾನದಲ್ಲಿ ವಿಲೇವಾರಿ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ಮುಂದಿನ ದಿನಗಳಲ್ಲಿ ಅನಧಿಕೃತವಾಗಿ ತ್ಯಾಜ್ಯ ಸುರಿಸುವುದು ಅಥವಾ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸುವುದು ಕಂಡುಬAದಲ್ಲಿ ನಿಯಮಾನುಸಾರ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಯಿತು. ಸ್ವಚ್ಛಗೊಳಿಸಲಾದ ಪ್ರದೇಶದಲ್ಲಿ ಮರು ತ್ಯಾಜ್ಯ ಸುರಿಯದಂತೆ ನಿರಂತರ ನಿಗಾ ವಹಿಸಲು ವಲಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಸ್ಥಳೀಯ ನಿವಾಸಿಗಳು ಹಾಗೂ ವ್ಯಾಪಾರಸ್ಥರು ಪ್ರದೇಶವನ್ನು ಸ್ವಚ್ಛವಾಗಿಡಲು ಪಾಲಿಕೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು. ಸ್ವಚ್ಛ ಸಿ.ವಿ. ರಸ್ತೆ ಆರೋಗ್ಯಕರ ಮೈಸೂರು” ಎಂಬ ಆಶಯದೊಂದಿಗೆ ನಡೆದ ಈ ಬೃಹತ್ ಸ್ವಚ್ಛತಾ ಕಾರ್ಯಾಚರಣೆಯು ಅಧಿಕಾರಿಗಳು, ಪೌರಕಾರ್ಮಿಕರು, ಸ್ಥಳೀಯ ನಿವಾಸಿಗಳು ಹಾಗೂ ಸಂಘ-ಸAಸ್ಥೆಗಳ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ನಡೆಯಿತು.



