ನೈರುತ್ಯ ರೈಲ್ವೆಯ ಮಹಾಪ್ರಬಂಧಕರಿAದ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ
ಮೈಸೂರು ; ನೈರುತ್ಯ ರೈಲ್ವೆಯ ಮಹಾಪ್ರಬಂಧಕ ಪಿ. ಅನಂತ್ ಅವರು ಮೈಸೂರು ವಿಭಾಗದ ವಿವಿಧ ಘಟಕಗಳು ಹಾಗೂ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ ನಡೆಸಿದರು. ಪರಿಶೀಲನೆಯ ಸಂದರ್ಭದಲ್ಲಿ ಅವರು ಮೈಸೂರು ರೈಲ್ವೆ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಆರೋಗ್ಯ ಸೇವೆಗಳ ಗುಣಮಟ್ಟ ಹಾಗೂ ರೋಗಿಗಳ ಆರೈಕೆಯನ್ನು ಪರಿಶೀಲಿಸಿದರು. ಅವರು ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳೊಂದಿಗೆ ಸಂವಾದ ನಡೆಸಿ, ವೈದ್ಯಕೀಯ ಉಪಕರಣಗಳು, ಆರೋಗ್ಯ ಸೌಲಭ್ಯಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಲಭ್ಯತೆಯನ್ನು ಅವಲೋಕಿಸಿದರು. ರೈಲ್ವೆ ನೌಕರರು ಮತ್ತು ಅವರ ಕುಟುಂಬಗಳಿಗೆ…