Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆ.8ರಂದು ವಿಪಿಎಫ್ ಪದಾಧಿಕಾರಿಗಳ ಪದಗ್ರಹಣ*ವಿಪ್ರ ಸಮಾಜದ ಸಾಧಕರಿಗೆ ವಿಪ್ರರತ್ನ” ಪ್ರಶಸ್ತಿ ಪ್ರದಾನ


ಮೈಸೂರು: ವಿಪ್ರ ಪ್ರೊಫೆಷನಲ್ ಫೋರಂ(ವಿಪಿಎಫ್) ವತಿಯಿಂದ ಆ.8ರಂದು ವಿಪಿಎಫ್‌ನ 2026-28ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದ ಸಾಧಕರಿಗೆ “ವಿಪ್ರರತ್ನ” ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ನಗರದ ಗಣಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪದಲ್ಲಿ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿಗಳ ಸಾನಿಧ್ಯದಲ್ಲಿ ಸಮಾರಂಭ ನಡೆಯಲಿದೆ. 10ನೇ ವರ್ಷದ ಸಂಭ್ರಮಾಚರಣೆ ಹಾಗೂ ವಿಪ್ರರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಸೂರು ಸೇರಿದಂತೆ ವಿವಿಧೆಡೆಗಳಲ್ಲಿರುವ ತ್ರಿಮತಸ್ಥ ಬ್ರಾಹ್ಮಣ ಸಮುದಾಯದ ನೂರಾರು ಮಂದಿ ಭಾಗವಹಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ವಿಪ್ರ ಪ್ರೊಫೆಷನಲ್ ಫೋರಂನ ನೂತನ ಅಧ್ಯಕ್ಷ ಡಾ. ಎಸ್. ಮುರುಳಿ, ಇಂದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿಪ್ರ ಸಮುದಾಯದವರು ಪರಸ್ಪರ ಪರಿಚಿತರಾಗಿ, ಅಗತ್ಯ ಸಂದರ್ಭದಲ್ಲಿ ಪರಸ್ಪರ ಸಹಕಾರಿಯಾಗಬೇಕು. ವೇದ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶವೂ ಈ ಕಾರ್ಯಕ್ರಮದ ಪ್ರಮುಖ ಆಶಯವಾಗಿದೆ ಎಂದರು. ಈ ನಿಟ್ಟಿನಲ್ಲಿ ವಿಪ್ರ ಪ್ರೊಫೆಷನಲ್ ಫೋರಂ ಹತ್ತು ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಹೊಸ ಕಾರ್ಯಕಾರಿ ಸಮಿತಿಯ ಪದಗ್ರಹಣದ ಹಿನ್ನೆಲೆಯಲ್ಲಿ ಫೋರಂನ ಧ್ಯೇಯ, ಸಾಧನೆಗಳು, ಮುಂದಿನ ಕಾರ್ಯಯೋಜನೆಗಳ ಕುರಿತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ಆ. 8ರ ಶನಿವಾರ ಸಂಜೆ 6 ಗಂಟೆಗೆ ಗಣಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪದಲ್ಲಿ ಸಮಾರಂಭ ಆಯೋಜಿಸಲಾಗಿದೆ ಎಂದು ತಿಳಿಸಿದರು.
“ವಿಪ್ರರತ್ನ” ಪ್ರಶಸ್ತಿ ಪ್ರದಾನ:
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಶ್ರೀ ಶಂಕರನಾಥ್ ಜೋಯಿಸ್, ಚಾಮುಂಡಿಬೆಟ್ಟದ ಶಶಿಶೇಖರ ದೀಕ್ಷಿತ್, ಶಂಕರ ಮಠದ ಆಚಾರ್ಯರು, ಉತ್ತರಾದಿ ಮಠದ ಅನಿರುದ್ಧಾಚಾರ್ಯರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 15 ಗಣ್ಯರಿಗೆ “ವಿಪ್ರರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಎಲ್ಲಾ ಕಾರ್ಯಕ್ರಮದ ನಂತರ ಪರಮಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ಆಶೀರ್ವಚನ ಇರಲಿದ್ದು, ಬಳಿಕ ಎಲ್ಲರಿಗೂ ಭೋಜನ ಹಾಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಎಸ್‌ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಿ. ಶ್ರೀಹರಿ ಮಾತನಾಡಿ, ವಿಪ್ರ ಪ್ರೊಫೆಷನಲ್ ಫೋರಂ ಒಂದು ಸಂಘಟನೆ ಮಾತ್ರವಲ್ಲ, ಇದು ಸಮುದಾಯಕ್ಕೆ ಕೊಡುಗೆ ನೀಡುವ ಸಂಕಲ್ಪದಿAದ ಹುಟ್ಟಿದ ಚಳವಳಿ. ಸಮಾಜವನ್ನು ಗಟ್ಟಿಗೊಳಿಸಿ, ಅದನ್ನು ಸಮಾಜಸೇವೆಗೆ ಅರ್ಪಿಸುವ ಉದ್ದೇಶದಿಂದ ಈ ವೇದಿಕೆ ರೂಪುಗೊಂಡಿತು. ಈ ನಿಟ್ಟಿನಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಯಾವುದೇ ವೈಯಕ್ತಿಕ ಅಜೆಂಡಾವಿಲ್ಲದೆ, ಪರಸ್ಪರ ಪ್ರೀತಿ, ವಿಶ್ವಾಸ, ಸಹಕಾರದಿಂದ ಈವರೆಗೂ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಸಮುದಾಯದ ಸದಸ್ಯರಿಗೆ ನೆರವಾಗುವುದು, ಉದ್ಯೋಗ ಮತ್ತು ಅವಕಾಶಗಳನ್ನು ಹಂಚಿಕೊAಡು, ಪರಸ್ಪರ ಕೈಹಿಡಿಯುವುದು, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ನಮ್ಮ ಪ್ರಮುಖ ಧ್ಯೇಯವಾಗಿದೆ ಎಂದರು.
ಈ ವೇಳೆ ಉಪಾಧ್ಯಕ್ಷರಾದ ಸುಧೀಂದ್ರ, ಕೆ.ಆರ್. ಸತ್ಯನಾರಾಯಣ್, ಕಾರ್ಯದರ್ಶಿ ಆರ್. ಮಂಜುನಾಥ್ ಶ್ರೀವತ್ಸ ಮತ್ತಿತರರು ಉಪಸ್ಥಿತರಿದ್ದರು,.