
ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರಂದು ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್. ತಿಳಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದ ಕವಾಯತ್ತು ಮೈದಾನದಲ್ಲಿ ಧ್ವಜಾರೋಹಣ ನೆರವೇರಲಿದೆ. ಶಿಷ್ಟಾಚಾರದ ಪ್ರಕಾರ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿ ಎಂದರು.
ಸ್ವಾತAತ್ರ÷್ಯ ದಿನಾಚರಣೆಯು ಜಿಲ್ಲೆಯ ಪ್ರತಿಯೊಬ್ಬ ನಾಗರೀಕರು ಆಚರಿಸಬೇಕಿರುವ ಹಬ್ಬ ವಾಗಿದ್ದು, ಸಾರ್ವಜನಿಕರು, ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸ್ವಾತಂತ್ರ÷್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದAತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಲು ಸ್ವಾಗತ, ವೇದಿಕೆ, ಸ್ವಚ್ಛತೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು.
ಪಥ ಸಂಚಲನ ಜಿಲ್ಲೆಯ ಪ್ರೌಢಶಾಲೆ, ಕಾಲೇಜು, ಎನ್.ಸಿ.ಸಿ ವಿಭಾಗ, ಪೊಲೀಸ್ ಸೇರಿದಂತೆ ವಿವಿಧ ತಂಡಗಳು ಪಥ ಸಂಚಲನದಲ್ಲಿ ಭಾಗವಹಿಸಲಿದ್ದು, ಇವರಿಗೆ ಆಗಸ್ಟ್ 12 ಹಾಗೂ 13 ರಂದು ಅಭ್ಯಾಸ ಮಾಡಿಕೊಳ್ಳಲು ವ್ಯವಸ್ಥೆ ಕಲ್ಪಿಸಿ. ಪಥ ಸಂಚಲನ ಶಿಸ್ತು ಬದ್ಧವಾಗಿರಬೇಕು ಎಂದು ಸೂಚನೆ ನೀಡಿದರು.
ಸಾಂಸ್ಕöÈತಿಕ ಕಾರ್ಯಕ್ರಮಗಳು ಬೆಳಿಗ್ಗೆ ಬನ್ನಿಮಂಟಪದ ಕವಾಯತ್ತು ಮೈದಾನದಲ್ಲಿ ಹಾಗೂ ಸಂಜೆ ಕಲಾಮಂದಿರದಲ್ಲಿ ನಡೆಯುವ ಸಾಂಸ್ಕöÈತಿಕ ಕಾರ್ಯಕ್ರಮಗಳಿಗೆ ಪ್ರೌಢ ಶಾಲಾ ವಿದ್ಯಾರ್ಥಿಗಳ ಉತ್ತಮ ತಂಡ ಆಯ್ಕೆ ಮಾಡಿ ದೇಶಭಕ್ತಿ ಗೀತೆಗಳಿಗೆ ತರಬೇತಿ ನೀಡಿ, ಹಾಡುಗಳು ಪುನಾರವರ್ತನೆಯಾಗದಂತೆ ನೋಡಿಕೊಳ್ಳಿ ಎಂದರು.
ಹಾಜರಾತಿ ಕಡ್ಡಾಯ ; ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಕಡ್ಡಾಯವಾಗಿ ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದ ಕವಾಯತ್ತು ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಿಬ್ಬಂದಿಗಳೊAದಿಗೆ ಹಾಜರಾಗಬೇಕು, ತಾತ್ಕಲಿಕವಾಗಿ ತೆರೆಯುವ ಕಚೇರಿಯಲ್ಲಿ ಕಡ್ಡಾಯವಾಗಿ ಹಾಜರಾತಿ ಹಾಕಬೇಕು ಎಂದರು.
ದೀಪಾಲAಕಾರ ಸರ್ಕಾರಿ ಕಚೇರಿಗಳು ಸ್ವಾತಂತ್ರ÷್ಯ ದಿನಾಚರಣೆಯ ಅಂಗವಾಗಿ ತಮ್ಮ ಕಟ್ಟಡಗಳಿಗೆ ದೀಪಾಲಂಕಾರ ಮಾಡಿಕೊಂಡು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಬೇಕು ಎಂದರು.
ಸಭೆಯಲ್ಲಿ ಮೈಸೂರು ಉಪವಿಭಾಗಾಧಿಕಾರಿ ಆಶಪ್ಪ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉದಯ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.