Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನೈರುತ್ಯ ರೈಲ್ವೆಯ ಮಹಾಪ್ರಬಂಧಕರಿAದ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ

ಮೈಸೂರು ; ನೈರುತ್ಯ ರೈಲ್ವೆಯ ಮಹಾಪ್ರಬಂಧಕ ಪಿ. ಅನಂತ್ ಅವರು ಮೈಸೂರು ವಿಭಾಗದ ವಿವಿಧ ಘಟಕಗಳು ಹಾಗೂ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ ನಡೆಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಅವರು ಮೈಸೂರು ರೈಲ್ವೆ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಆರೋಗ್ಯ ಸೇವೆಗಳ ಗುಣಮಟ್ಟ ಹಾಗೂ ರೋಗಿಗಳ ಆರೈಕೆಯನ್ನು ಪರಿಶೀಲಿಸಿದರು. ಅವರು ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳೊಂದಿಗೆ ಸಂವಾದ ನಡೆಸಿ, ವೈದ್ಯಕೀಯ ಉಪಕರಣಗಳು, ಆರೋಗ್ಯ ಸೌಲಭ್ಯಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಲಭ್ಯತೆಯನ್ನು ಅವಲೋಕಿಸಿದರು. ರೈಲ್ವೆ ನೌಕರರು ಮತ್ತು ಅವರ ಕುಟುಂಬಗಳಿಗೆ ಉತ್ತಮ, ಸಮಯೋಚಿತ ಹಾಗೂ ರೋಗಿ-ಕೇಂದ್ರಿತ ವೈದ್ಯಕೀಯ ಸೇವೆಗಳನ್ನು ಒದಗಿಸುವ ಅಗತ್ಯವನ್ನು ಅವರು ಒತ್ತಿಹೇಳಿದರು ಹಾಗೂ ಆಸ್ಪತ್ರೆಯನ್ನು ಆಧುನಿಕ ಸೌಲಭ್ಯಗಳಿಂದ ಸಜ್ಜುಗೊಳಿಸುವ ಮಹತ್ವವನ್ನು ವಿವರಿಸಿದರು.
ಇದಲ್ಲದೆ, ಮಹಾಪ್ರಬಂಧಕರು ಮೈಸೂರು-ಚಾಮರಾಜನಗರ ವಿಭಾಗದಲ್ಲಿ ವಿಂಡೋ ಟ್ರೆöÊಲಿಂಗ್ ಪರಿಶೀಲನೆ ನಡೆಸಿದರು. ಈ ವೇಳೆ ನಂಜನಗೂಡಿನಲ್ಲಿ ಸ್ಟೇಷನ್ ಮಾಸ್ಟರ್ ಪ್ಯಾನೆಲ್, ನಿಲ್ದಾಣ ಆವರಣ ಹಾಗೂ ರೈಲು ಹಳಿಗಳ ಪಾಯಿಂಟ್‌ಗಳನ್ನು ಪರಿಶೀಲಿಸಿದರು. ಚಾಮರಾಜನಗರ ನಿಲ್ದಾಣದಲ್ಲಿ ಅಮೃತ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಿ, ಸ್ಟೇಷನ್ ಮಾಸ್ಟರ್ ಪ್ಯಾನೆಲ್ ಬೋರ್ಡ್ ಹಾಗೂ ನಂಜನಗೂಡು-ಚಾಮರಾಜನಗರ ವಿಭಾಗದ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 35 ಅನ್ನು ಪರಿಶೀಲಿಸಿದರು. ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದರೊಂದಿಗೆ ಗುಣಮಟ್ಟ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ನಂತರ, ಮಹಾಪ್ರಬಂಧಕರು ಮೈಸೂರು ವಿಭಾಗೀಯ ಕಚೇರಿಯಲ್ಲಿ ವಿಮರ್ಶಾ ಸಭೆಯನ್ನು ನಡೆಸಿ, ವಿಭಾಗದ ಕಾರ್ಯಕ್ಷಮತೆ ಹಾಗೂ ಪ್ರಮುಖ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ಕಾರ್ಯಾಚರಣೆಯನ್ನು ಬಲಪಡಿಸುವುದು, ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವುದು ಹಾಗೂ ಪ್ರಯಾಣಿಕರ ಸೇವೆಗಳನ್ನು ಸುಧಾರಿಸುವುದರ ಬಗ್ಗೆ ಸಭೆಯಲ್ಲಿ ತಿಳಿಸಿದರು.

ಈ ಪರಿಶೀಲನೆ ಹಾಗೂ ವಿಮರ್ಶಾ ಸಭೆಯಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ಸಿಪಿಎಂ/ ಗತಿಶಕ್ತಿ ಆನಂದ ಭಾರತಿ, ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ಅಶೋಕ್ ಕುಮಾರ್ ಹಾಗೂ ಮೈಸೂರು ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.